Breaking News
Home / Recent Posts / 2020-21 ನೇಸಾಲಿಗಾಗಿ ಜಿಲ್ಲಾ ಮಟ್ಟದ ಯುವ ಮಂಡಳ ಪ್ರಶಸ್ತಿಗಾಗಿ ಅರ್ಜಿ ಆಹ್ವಾನ

2020-21 ನೇಸಾಲಿಗಾಗಿ ಜಿಲ್ಲಾ ಮಟ್ಟದ ಯುವ ಮಂಡಳ ಪ್ರಶಸ್ತಿಗಾಗಿ ಅರ್ಜಿ ಆಹ್ವಾನ

Spread the love

2020-21 ನೇಸಾಲಿಗಾಗಿ ಜಿಲ್ಲಾ ಮಟ್ಟದ ಯುವ ಮಂಡಳ ಪ್ರಶಸ್ತಿಗಾಗಿ ಅರ್ಜಿ ಆಹ್ವಾನ
ಬೆಳಗಾವಿ: ಭಾರತ ಸರ್ಕಾರದ ಯುವ ಕಾರ್ಯ ಮತ್ತು ಕ್ರೀಡಾ ಸಚಿವಾಲಯದ ನೆಹರು ಯುವ ಕೇಂದ್ರ ಬೆಳಗಾವಿ ಇವರು ಬೆಳಗಾವಿ ಜಿಲ್ಲೆಗಾಗಿ 2020-21 ನೇ ಸಾಲಿಗಾಗಿ ಜಿಲ್ಲಾ ಮಟ್ಟದ ಯುವ ಮಂಡಳ ಪ್ರಶಸ್ತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸುವ ಯುವ ಮಂಡಳಗಳು ಕರ್ನಾಟಕ ಸಂಘ ಸಂಸ್ಥೆಗಳ ಕಾಯ್ದೆ 1960 ರ ಅಡಿಯಲ್ಲಿ ನೋಂದಣಿಯಾಗಿರಬೇಕು ಮತ್ತು ನೆಹರು ಯುವ ಕೇಂದ್ರ ಬೆಳಗಾವಿ ಕಛೇರಿಯಲ್ಲಿ ಸಂಯೋಜನೆಗೊಂಡಿರಬೇಕು. ಹಾಗೂ ದಿನಾಂಕ: 01-04-2019 ರಿಂದ 31-03-2020 ರ ಅವಧಿಯಲ್ಲಿ ಸಮಾಜದ ಕೆಲಸ ಕಾರ್ಯಗಳನ್ನು ಮಾಡಿರಬೇಕು. ಅಂದರೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ಪರಿಸರ ಸೌಂರಕ್ಷಣೆ, ವೃತ್ತಿ ತರಬೇತಿ, ಸಾಕ್ಷರತೆ, ಮಹಿಳಾ ಸಬಲೀಕರಣ ಸಾಂಸ್ಕøತಿಕ ಕಾರ್ಯಕ್ರಮ, ಸ್ವಯಂ ಉದ್ಯೋಗ, ಸಾಮಾಜಿಕ ಪಿಡುಗುಗಳು ಕ್ರೀಡೆಗಳು ಹಾಗೂ ಸಮಾಜ ಕಲ್ಯಾಣಗಳ ಬಗ್ಗೆ ಯುವ ಮಂಡಳಗಳು ಕೆಲಸ ಮಾಡಿರಬೇಕು ಹಾಗೂ ಈ ಕುರಿತು ಸಂಬಂಧಿಸಿದ ದಾಖಲೆಗಳು ಇರಬೇಕು.
ಜಿಲ್ಲಾ ಮಟ್ಟದ ಯುವ ಮಂಡಳ ಪ್ರಶಸ್ತಿ ರೂ.25,000/- ಹಾಗೂ ಪ್ರಶಸ್ತಿ ಪತ್ರವನ್ನು ನೀಡಲಾಗುವುದು. ಬೆಳಗಾವಿ ಜಿಲ್ಲೆಯ ಆಸಕ್ತ ಹಾಗೂ ಅರ್ಹ ಯುವಕ/ತಿ/ಮಹಿಳಾ ಮಂಡಳಗಳು ಜಿಲ್ಲಾ ಯುವ ಸಮನ್ವಯ ಅಧಿಕಾರಿಗಳು ನೆಹರು ಯುವ ಕೇಂದ್ರ, ಸಿ,ಟಿ,ಎಸ್, ನಂ:9663 ಪ್ಲಾಟ್ ನಂ : 2367 ಅಣ್ಣಪೂರ್ಣ ನಿಲಯ 1ನೇ ಕ್ರಾಸ್, ಮಹಾಂತೇಶ ನಗರ, ಬೆಳಗಾವಿ 590017 ಇವರನ್ನು ಸಂಪರ್ಕಿಸಿ ನಿಗದಿತ ಅರ್ಜಿ ನಮೂನೆಗಳನ್ನು ಪಡೆಯಬಹುದು. ಪೂರ್ಣವಾದ ಅರ್ಜಿಗಳನ್ನು ಪ್ರಸ್ತಾವಣೆಯೊಂದಿಗೆ ಅಗತ್ಯ ದಾಖಲಾತಿಗಳನ್ನು ಅಂದರೆ, ಪೇಪರ್ ಕಟಿಂಗ್ ಪ್ರಮಾಣ ಪತ್ರಗಳು,ಕಾರ್ಯಕ್ರಮದ ಫೋಟೋ ಇತ್ಯಾದಿಗಳನ್ನು ಲಗತ್ತಿಸಿ 05-11-2020 ರ ಒಳಗಾಗಿ ನೆಹರು ಯುವ ಕೇಂದ್ರ, ಬೆಳಗಾವಿ ಸಿ,ಟಿ,ಎಸ್, ನಂ:9663 ಪ್ಲಾಟ್ ನಂ : 2367 ಅಣ್ಣಪೂರ್ಣ ನಿಲಯ 1ನೇ ಕ್ರಾಸ್, ಮಹಾಂತೇಶ ನಗರ, ಬೆಳಗಾವಿ ಈ ಕಛೇರಿಗೆ ಸಲ್ಲಿಸಲು ಈ ಮೂಲಕ ಕೋರಲಾಗಿದೆ. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 0831-2453496 ಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ಯುವ ಸಮನ್ವಯ ಅಧಿಕಾರಿಗಳಾದ ರೋಹಿತ ಕಲರಾ ಹಾಗೂ ಆರ್ ಆರ್ ಮುತಾಲಿಕ ದೇಸಾಯಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ


Spread the love

About inmudalgi

Check Also

ಮಾರುತಿ ಕೋಳಿ ಅವರಿಗೆ ರಾಷ್ಟ್ರೀಯ ಪರಶುರಾಮ ಪ್ರಶಸ್ತಿ ಪ್ರಧಾನ

Spread the love ಮಾರುತಿ ಕೋಳಿ ಅವರಿಗೆ ರಾಷ್ಟ್ರೀಯ ಪರಶುರಾಮ ಪ್ರಶಸ್ತಿ ಪ್ರಧಾನ ಮೂಡಲಗಿ: ಕೆರಳಾದ ಶ್ರೀ ಶಟ್ ಶಾಸ್ತ್ರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ