Breaking News
Home / Recent Posts / ರಾಜ್ಯಸಭಾ ಸದಸ್ಯರಾದ ಈರಣ್ಣ ಕಡಾಡಿ ಅವರ ಜನಸಂಪರ್ಕ ಕಾರ್ಯಾಲಯದಲ್ಲಿ ಆದಕವಿ ಶ್ರೀ ವಾಲ್ಮೀಕಿ ಜಯಂತಿ

ರಾಜ್ಯಸಭಾ ಸದಸ್ಯರಾದ ಈರಣ್ಣ ಕಡಾಡಿ ಅವರ ಜನಸಂಪರ್ಕ ಕಾರ್ಯಾಲಯದಲ್ಲಿ ಆದಕವಿ ಶ್ರೀ ವಾಲ್ಮೀಕಿ ಜಯಂತಿ

Spread the love

ಮೂಡಲಗಿ: ರಾಮಾಯಣ ಎಂಬ ಅತ್ಯದ್ಭುತ ಕಾವ್ಯವನ್ನು ರಚಿಸಿದ ಆದಕವಿ ಶ್ರೀ ವಾಲ್ಮೀಕಿ ಮಹರ್ಷಿಗಳ ಜಯಂತಿಯನ್ನು ಶನಿವಾರ ಅ.31 ರಂದು ಕಲ್ಲೋಳಿ ಪಟ್ಟಣದ ರಾಜ್ಯಸಭಾ ಸದಸ್ಯರಾದ ಈರಣ್ಣ ಕಡಾಡಿ ಅವರ ಜನಸಂಪರ್ಕ ಕಾರ್ಯಾಲಯದಲ್ಲಿ ಆದಕವಿ ಶ್ರೀ ವಾಲ್ಮೀಕಿ ಮಹರ್ಷಿಗಳ ಭಾವಚಿತ್ರಕ್ಕೆ ಈರಣ್ಣ ಕಡಾಡಿ ಅವರು ಪೂಜೆ ಸಲ್ಲಿಸಿ ನಮಿಸಿದರು.
ಈ ಸಂದಭದಲ್ಲಿ ಮಾತನಾಡಿದ ಈರಣ್ಣ ಕಡಾಡಿ ಅವರು ಆದಿಕವಿ ರಾಮಾಯಣದ ಮೂಲಕ ಸಾರ್ವಕಾಲಿಕ ಆದರ್ಶಗಳನ್ನು, ಜೀವನ ಮೌಲ್ಯಗಳನ್ನು ತಿಳಿಸಿಕೊಟ್ಟು, ಅನಾದಿ ಕಾಲದಿಂದಲೂ ಭಾರತ ಭೂಮಿಯನ್ನು ಪಾವನಗೊಳಿಸುತ್ತಿರುವ ಆದಿಕವಿ ಮಹರ್ಷಿ ವಾಲ್ಮೀಕಿ ಅವರ ಜಯಂತಿ ಇಂದು ಆ ಮಹಾನ್ ಋಷಿಕವಿಗೆ ಅನಂತ ಪ್ರಣಾಮಗಳನ್ನು ಸಲ್ಲಿಸುತ್ತೇನೆ ಎಂದರು.
ಈ ಕಾರ್ಯಕ್ರಮದಲ್ಲಿ ನಿರ್ದೇಶಕರಾದ ಶ್ರೀಶೈಲ ತುಪ್ಪದ, ಪರಪ್ಪ ಮಳವಾಡ, ಸಹದೇವ ಹೆಬ್ಬಾಳ, ಬಾಳಪ್ಪ ಸಂಗಟಿ, ಸಿದ್ದಪ್ಪ ಹೆಬ್ಬಾಳ, ಸೋಮಲಿಂಗ ಹಡಿಗನಾಳ, ಮಲ್ಲಿಕಾರ್ಜುನ ಹುಲೆನ್ನವರ, ಪ್ರಧಾನ ವ್ಯವಸ್ಥಾಪಕ ಹಣಮಂತ ಕಲಕುಟ್ರಿ, ದೊಡ್ಡಪ್ಪ ಉಜ್ಜಿನಕೊಪ್ಪ ಸೇರಿದಂತೆ ಸರ್ವ ಸದಸ್ಯರು, ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.
ಪರಪ್ಪ ಗಿರೆಣ್ಣವರ ಸ್ವಾಗತಿಸಿದರು. ಶಂಕರ ಕೌಜಲಗಿ ಕಾರ್ಯಕ್ರಮ ನಿರೂಪಿಸಿ, ಪ್ರಶಾಂತ ಪಟ್ಟಣಶೆಟ್ಟಿ ವಂದಿಸಿದರು.


Spread the love

About inmudalgi

Check Also

ಮಾರುತಿ ಕೋಳಿ ಅವರಿಗೆ ರಾಷ್ಟ್ರೀಯ ಪರಶುರಾಮ ಪ್ರಶಸ್ತಿ ಪ್ರಧಾನ

Spread the love ಮಾರುತಿ ಕೋಳಿ ಅವರಿಗೆ ರಾಷ್ಟ್ರೀಯ ಪರಶುರಾಮ ಪ್ರಶಸ್ತಿ ಪ್ರಧಾನ ಮೂಡಲಗಿ: ಕೆರಳಾದ ಶ್ರೀ ಶಟ್ ಶಾಸ್ತ್ರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ