ವಾಹನ ಚಾಲಕರ ಕ್ಷೇಮಾಭಿವೃದ್ಧಿ ಸಂಘದಿಂದ ಕನ್ನಡ ರಾಜ್ಯೋತ್ಸವ ಆಚರಣೆ
ಮೂಡಲಗಿ : ಪಟ್ಟಣದ ವಾಹನ ಚಾಲಕರ ಕ್ಷೇಮಾಭಿವೃದ್ಧಿ ಸಂಘದ ಸದಸ್ಯರು ತಮ್ಮ ಕಚೇರಿಯಲ್ಲಿ ಕನ್ನಡಾಂಬೆಯ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ನಂತರ ತಮ್ಮ ವಾಹನಗಳಿಗೆ ಕನ್ನಡದ ಬಾವುಟ ಕಟ್ಟಿ ನಗರದ ಪ್ರಮುಖ ರಸ್ತೆಗಳಲ್ಲಿ ಕನ್ನಡ ಪರ ಘೋಷಣೆಗಳನ್ನು ಕೂಗುತ್ತಾ ವಾಹನದಲ್ಲಿ ಸಂಚರಿಸುವ ಮೂಲಕ ಕನ್ನಡ ರಾಜ್ಯೋತ್ಸವನ್ನು ಆಚರಿಸಿದರು