Breaking News
Home / Recent Posts / ಕಲ್ಲು ಎತ್ತುವ ದೇಸಿ ಕ್ರೀಡೆಯಲ್ಲಿ ಮಾಡಿರುವ ಸಾಧನೆಗೆ ಕರ್ನಾಟಕ ರಾಜ್ಯ ಕ್ರೀಡಾ ರತ್ನ ಪ್ರಶಸ್ತಿ

ಕಲ್ಲು ಎತ್ತುವ ದೇಸಿ ಕ್ರೀಡೆಯಲ್ಲಿ ಮಾಡಿರುವ ಸಾಧನೆಗೆ ಕರ್ನಾಟಕ ರಾಜ್ಯ ಕ್ರೀಡಾ ರತ್ನ ಪ್ರಶಸ್ತಿ

Spread the love

ಮೂಡಲಗಿ: ತಾಲ್ಲೂಕಿನ ಬೀಸನಕೊಪ್ಪ ಗ್ರಾಮದ ಯಮನಪ್ಪ ಮಾಯಪ್ಪ ಕಲ್ಲೋಳಿ ಅವರು ಗುಂಡು ಕಲ್ಲು ಎತ್ತುವ ದೇಸಿ ಕ್ರೀಡೆಯಲ್ಲಿ ಮಾಡಿರುವ ಸಾಧನೆಗೆ ಕರ್ನಾಟಕ ರಾಜ್ಯ ಕ್ರೀಡಾ ರತ್ನ ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ. ಸೋಮವಾರ ಬೆಂಗಳೂರಿನಲ್ಲಿ ಜರುಗಿದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂಪ್ಪ ಅವರು ರೂ. 1 ಲಕ್ಷ ಚೆಕ್, ಪ್ರಶಸ್ತಿ ಫಲಕ ಹಾಗೂ ಪ್ರಶಸ್ತಿ ಪತ್ರವನ್ನು ನೀಡಿ ಗೌರವಿಸಿದರು.


ಯಮನಪ್ಪ ಕಲ್ಲೋಳಿ ಅವರು ಕಳೆದ 12 ವರ್ಷಗಳಿಂದ ಗುಂಡು ಕಲ್ಲುವ ಎತ್ತುವ ಕಸತ್ತು ಮಾಡುವ ಮೂಲಕ ನಾಡಿನ ಜನರ ಗಮನಸೆಳೆದಿದ್ದಾರೆ. ಜಾತ್ರೆ, ಉತ್ಸವ ಸೇರಿದಂತೆ ಇನ್ನೂರಕ್ಕೂ ಅಧಿಕ ಸ್ಪರ್ಧೆ ಹಾಗೂ ಪ್ರದರ್ಶನಗಳಲ್ಲಿ ಭಾಗವಹಿಸಿ ನೂರಾರು ಪ್ರಶಸ್ತಿ, ಗೌರವಗಳನ್ನು ತಮ್ಮ ಮುಡಿಗೆ ಏರಿಸಿಕೊಂಡಿದ್ದಾರೆ. ಯಮನಪ್ಪ ಕಲ್ಲೋಳಿ ಅವರಿಗೆ ಪ್ರಶಸ್ತಿ ದೊರೆತಿದ್ದು ಬೀಸನಕೊಪ್ಪದ ಗ್ರಾಮಕ್ಕೆ ಹೆಮ್ಮ ತಂದಿದೆ ಎಂದು ಗ್ರಾಮಸ್ಥರಾದ ಗ್ರಾಮ ಪಂಚಾಯ್ತಿ ಸದಸ್ಯ ಬಸಪ್ಪ ಸಾರಾಪುರ, ಅರ್ಜುನ ಜಿಡ್ಡಿಮನಿ ಹಾಗೂ ದುಂಡಪ್ಪ ಕಲ್ಲಾರ ತಮ್ಮ ಖುಷಿ ವ್ಯಕ್ತಪಡಿಸಿದ್ದಾರೆ.


Spread the love

About inmudalgi

Check Also

‘ಮೂಡಲಗಿಯಲ್ಲಿ ನ.23-24 ರಂದು 16ನೇ ಜಿಲ್ಲಾ ಸಾಹಿತ್ಯ ಸಮ್ಮೇಳನ’

Spread the love‘ಮೂಡಲಗಿಯಲ್ಲಿ ನ.23-24 ರಂದು 16ನೇ ಜಿಲ್ಲಾ ಸಾಹಿತ್ಯ ಸಮ್ಮೇಳನ’ ಜನಮನ ಸೇಳೆದ ಕನ್ನಡ ಬುತ್ತಿ ಜಾತ್ರೆ ಕಾರ್ಯಕ್ರಮ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ