Breaking News
Home / Recent Posts / ಡಿಸಿಸಿ ಬ್ಯಾಂಕ್ ಅಧ್ಯಕ್ಷರಾಗಿ ರಮೇಶ್ ಕತ್ತಿ ಹಾಗೂ ಉಪಾಧ್ಯಕ್ಷರಾಗಿ ಸುಭಾಷ್ ಡವಳೇಶ್ವರ ಪುನರಾಯ್ಕೆ

ಡಿಸಿಸಿ ಬ್ಯಾಂಕ್ ಅಧ್ಯಕ್ಷರಾಗಿ ರಮೇಶ್ ಕತ್ತಿ ಹಾಗೂ ಉಪಾಧ್ಯಕ್ಷರಾಗಿ ಸುಭಾಷ್ ಡವಳೇಶ್ವರ ಪುನರಾಯ್ಕೆ

Spread the love

ಬೆಳಗಾವಿ: ರಾಜ್ಯ ರಾಜಕೀಯದಲ್ಲಿ ತೀವ್ರ ಕುತೂಹಲ ಕೆರಳಿಸಿದ್ದ ಬೆಳಗಾವಿ ಜಿಲ್ಲಾ ಮಧ್ಯವರ್ತಿ ಬ್ಯಾಂಕ್(ಡಿಸಿಸಿ ಬ್ಯಾಂಕ್) ಅಧ್ಯಕ್ಷರಾಗಿ ರಮೇಶ್ ಕತ್ತಿ ಹಾಗೂ ಉಪಾಧ್ಯಕ್ಷರಾಗಿ ಸುಭಾಷ್ ಡವಳೇಶ್ವರ ಪುನರಾಯ್ಕೆಯಾಗಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬ್ಯಾಂಕ್ ನಿರ್ದೇಶಕರೂ ಆಗಿರುವ ಡಿಸಿಎಂ ಲಕ್ಷ್ಮಣ ಸವದಿ ಈ ಕುರಿತು ಮಾಹಿತಿ ನೀಡಿದ್ದು, ಬೆಳಗಾವಿ ಡಿಸಿಸಿ ಬ್ಯಾಂಕ್ ಹಾಲಿ ಅಧ್ಯಕ್ಷ ಉಪಾಧ್ಯಕ್ಷರೇ ಮುಂದುವರೆಯಲಿದ್ದಾರೆ. ಅಧ್ಯಕ್ಷರಾಗಿ ರಮೇಶ್ ಕತ್ತಿ ಹಾಗೂ ಉಪಾಧ್ಯಕ್ಷರಾಗಿ ಸುಭಾಷ್ ಡವಳೇಶ್ವರ ಅವರೇ ಮುಂದಿನ ಅವಧಿಗೂ ಆಯ್ಕೆಯಾಗಿದ್ದಾರೆ ಎಂದರು.

ಡಿಸಿಸಿ ಬ್ಯಾಂಕ್ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಅವಿರೋಧ ಆಯ್ಕೆಗೆ ಬಿಜೆಪಿ ನಾಯಕರು ಕಸರತ್ತು ನಡೆಸಿದ್ದರು. ಹಾಲಿ ಅಧ್ಯಕ್ಷ ರಮೇಶ್ ಕತ್ತಿ ಹಾಗೂ ಉಪಾಧ್ಯಕ್ಷರಾಗಿ ಸುಭಾಷ್ ಡವಳೇಶ್ವರ ಅವರೇ ಮುಂದಿನ ಅವಧಿಗೂ ಆಯ್ಕೆಯಾಗಿದ್ದಾರೆ ಎಂದರು.

ಡಿಸಿಸಿ ಬ್ಯಾಂಕ್ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಅವಿರೋಧ ಆಯ್ಕೆಗೆ ಬಿಜೆಪಿ ನಾಯಕರು ಕಸರತ್ತು ನಡೆಸಿದ್ದರು. ಹಾಲಿ ಅಧ್ಯಕ್ಷ ರಮೇಶ್ ಕತ್ತಿ ಆಯ್ಕೆಗೆ ತೀವ್ರ ವಿರೋಧ ವ್ಯಕ್ತವಾಗಿತ್ತು. ಈ ಹಿನ್ನೆಲೆಯಲ್ಲಿ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಹೊಸಬರನ್ನು ಆಯ್ಕೆ ಮಾಡುವ ನಿರೀಕ್ಷೆಯಿತ್ತು. ಆದರೀಗ ಹಾಲಿ ಅಧ್ಯಕ್ಷ ಹಾಗೂ ಉಪಾಧ್ಯಕ್ಷರೇ ಪುನರಾಯ್ಕೆಯಾಗಿದ್ದಾರೆ.


Spread the love

About inmudalgi

Check Also

19ನೇ ಶಿವಾನುಭವ ಗೋಷ್ಠಿ, ‘ಶುದ್ಧ ಕಾಯಕದಿಂದ ಜೀವನದಲ್ಲಿ ಸಂತೃಪ್ತಿ’

Spread the loveಮೂಡಲಗಿ: ‘ಪ್ರಾಮಾಣಿಕತೆ ಮತ್ತು ಶುದ್ಧ ಕಾಯಕದಿಂದ ಜೀವನದಲ್ಲಿ ಆನಂದ ಮತ್ತು ಸಂತೃಪ್ತಿ ದೊರೆಯುತ್ತದೆ” ಎಂದು ಅರಭಾವಿ ಮಠದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ