Breaking News
Home / Recent Posts / ನಗರಸಭೆ, ಪುರಸಭೆ, ಪ.ಪ ಅಧ್ಯಕ್ಷ- ಉಪಾಧ್ಯಕ್ಷರ ಮೀಸಲಾತಿ ರದ್ದು ಮಾಡಿದ ಹೈಕೋರ್ಟ್

ನಗರಸಭೆ, ಪುರಸಭೆ, ಪ.ಪ ಅಧ್ಯಕ್ಷ- ಉಪಾಧ್ಯಕ್ಷರ ಮೀಸಲಾತಿ ರದ್ದು ಮಾಡಿದ ಹೈಕೋರ್ಟ್

Spread the love

ನಗರಸಭೆ, ಪುರಸಭೆ, ಪ.ಪ ಅಧ್ಯಕ್ಷ- ಉಪಾಧ್ಯಕ್ಷರ ಮೀಸಲಾತಿ ರದ್ದು ಮಾಡಿದ ಹೈಕೋರ್ಟ್

ಬೆಂಗಳೂರು: ರಾಜ್ಯದ ಎಲ್ಲಾ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿಗಳ ಅಧ್ಯಕ್ಷ, ಉಪಾಧ್ಯಕ್ಷರ ಮೀಸಲಾತಿ ನಿಗದಿಪಡಿಸಿ ಕಳೆದ ಅಕ್ಟೋಬರ್8ರಂದು ಸರ್ಕಾರ ಹೊರಡಿಸಿದ್ದ ಆದೇಶವನ್ನು ಹೈಕೋರ್ಟ್ ರದ್ದುಗೊಳಿಸಿದೆ.
ಈ ಬಗ್ಗೆ ಹೈಕೋರ್ಟ್ ನ ಏಕಸದಸ್ಯ ಪೀಠ ಇಂದು ತೀರ್ಪು ನೀಡಿದ್ದು, ಮೇಲ್ಮನವಿ ಸಲ್ಲಿಸಲು ಸರ್ಕಾರಕ್ಕೆ ಹತ್ತು ದಿನಗಳ ಅವಕಾಶ ನೀಡಿದೆ.
ಅಕ್ಟೋಬರ್ 8ರಂದು ರಾಜ್ಯ ಸರ್ಕಾರ ನಗರಸಭೆ, ಪುರಸಭೆ, ಪಟ್ಟಣ ಪಂಚಾಯತಿಯ ಅಧ್ಯಕ್ಷರು, ಉಪಾಧ್ಯಕ್ಷರ ಮೀಸಲಾತಿ ಪಟ್ಟಿಯನ್ನು ಪ್ರಕಟಿಸಿ, ಅಧಿಸೂಚನೆ ಹೊರಡಿಸಿತ್ತು. ಆದರೆ ಈ ಆದೇಶವನ್ನು ಕೋರ್ಟ್ ಇಂದು ರದ್ದು ಮಾಡಿದೆ.
ರಾಜ್ಯದ ಒಟ್ಟು 277 ಸ್ಥಳೀಯ ಸಂಸ್ಥೆಗಳ ಅಧ್ಯಕ್ಷ – ಉಪಾಧ್ಯಕ್ಷ ಚುನಾವಣೆಗೆ ಮೀಸಲಾತಿ ಅಧಿಸೂಚನೆ ಹೊರಡಿಸಲಾಗಿತ್ತು. ಅದರಂತೆ ಬಹಳಷ್ಟು ಕಡೆ ಚುನಾವಣೆ ನಡೆದು ಅಧ್ಯಕ್ಷ – ಉಪಾಧ್ಯಕ್ಷರ ಚುನಾವಣೆ ನಡೆದು ಫಲಿತಾಂಶ ಪ್ರಕಟವಾಗಿದೆ. ಆದರೆ ಈ ಆದೇಶದಿಂದ ಈ ಚುನಾವಣಾ ಫಲಿತಾಂಶಗಳು ಅಮಾನತು ಸ್ಥಿತಿಯಲ್ಲಿರುತ್ತದೆ
ಮೇಲ್ಮನವಿಗೆ ಅವಕಾಶ: ಕೋರ್ಟ್ ಆದೇಶದ ವಿರುದ್ಧ ಮೇಲ್ಮನವಿ ಸಲ್ಲಿಸಲು ಸರ್ಕಾರ ಅವಕಾಶ ಕೋರಿದೆ. ಹೀಗಾಗಿ ಕೋರ್ಟ್ ಮೇಲ್ಮನವಿ ಸಲ್ಲಿಸಲು ಇಂದಿನಿಂದ ಹತ್ತು ದಿನಗಳ ಕಾಲ ಅವಕಾಶ ನೀಡಿದೆ. ಮೇಲ್ಮನವಿ ಸಲ್ಲಿಸಿದರೆ ಆಗ ಹೂಕೋರ್ಟ್ ನ ವಿಭಾಗೀಯ ಪೀಠ ನೀಡುವ ತೀರ್ಪು ಅಂತಿಮವಾಗಿರಲಿದೆ ಎಂದು ಕೋರ್ಟ್ ಸೂಚಿಸಿದೆ.


Spread the love

About inmudalgi

Check Also

ಮಾರುತಿ ಕೋಳಿ ಅವರಿಗೆ ರಾಷ್ಟ್ರೀಯ ಪರಶುರಾಮ ಪ್ರಶಸ್ತಿ ಪ್ರಧಾನ

Spread the love ಮಾರುತಿ ಕೋಳಿ ಅವರಿಗೆ ರಾಷ್ಟ್ರೀಯ ಪರಶುರಾಮ ಪ್ರಶಸ್ತಿ ಪ್ರಧಾನ ಮೂಡಲಗಿ: ಕೆರಳಾದ ಶ್ರೀ ಶಟ್ ಶಾಸ್ತ್ರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ