ಮೂಡಲಗಿ: ಕೇಂದ್ರ ಸರ್ಕಾರವು ಕಬ್ಬು ಬೆಳೆಗಾರರಿಗೆ ತಾವು ಬೆಳೆದ ಉತ್ಪನ್ನಕ್ಕೆ ಸಕ್ಕರೆ ಕಾರ್ಖಾನೆಗಳು ಬಾಕಿ ಪಾವತಿಸದ ಕಾರಣ ದೇಶದ ಕಬ್ಬು ಬೆಳೆಗಾರರು ಸಂಕಷ್ಟಕ್ಕೆ ಸಿಲುಕಬಾರದೆಂದು ರೂ.3500 ಕೋಟಿ ವಿಶೇಷ ಪ್ಯಾಕೇಜ್ ಘೋಷಿಸಿದೆ ಎಂದು ರಾಜ್ಯಸಭಾಎಂದು ಸದಸ್ಯ ಹಾಗೂ ರೈತ ಮೋರ್ಚಾ ಅಧ್ಯಕ್ಷರಾದ ಈರಣ್ಣ ಕಡಾಡಿ ಅವರು ಕೇಂದ್ರ ಸರ್ಕಾರದ ಕ್ರಮವನ್ನು ಸ್ವಾಗತಿಸಿದ್ದಾರೆ.
ಗುರುವಾರ ಡಿ.17 ರಂದು ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿರುವ ಅವರು 2020-21ನೇ ಹಂಗಾಮಿನಲ್ಲಿ ರಪ್ತು ಮಾಡಲಾಗುತ್ತಿರುವ 60 ಲಕ್ಷ್ ಟನ್ ಸಕ್ಕರೆಗೆ ಸಬ್ಸಿಡಿ ಘೋಷಿಸಲಾಗುತ್ತಿದ್ದು, ಸಬ್ಸಿಡಿ ಹಣವನ್ನು ನೇರವಾಗಿ ರೈತರ ಬ್ಯಾಂಕ್ ಖಾತೆಗಳಿಗೆ ಜಮೆ ಮಾಡುವ ನಿರ್ಧಾರ ಕೇಂದ್ರ ಸರ್ಕಾರ ಕೈಗೊಂಡಿದೆ ಎಂದರು.
ರೈತರು ತಮ್ಮ ಕಬ್ಬನ್ನು ನೇರವಾಗಿ ಸಕ್ಕರೆ ಕಾರ್ಖಾನೆಗಳಿಗೆ ಮಾರಾಟ ಮಾಡುತ್ತಾರೆ. ಆದರೆ ಸಕ್ಕರೆ ಕಾರ್ಖಾನೆಗಳ ಮಾಲಕರು ಸಕ್ಕರೆ ದಾಸ್ತಾನು ಹೆಚ್ಚಿರುವ ಕಾರಣ, ಹಣ ಪಾವತಿ ಮಾಡುತ್ತಿಲ್ಲ, ಇದರಿಂದ ರೈತರಿಗೆ ಬರಬೇಕಾದ ಬಾಕಿ ಹಣ ಬರುತ್ತಿಲ್ಲ. ಈ ಸಮಸ್ಯೆಯನ್ನು ನಿವಾರಿಸಲು ಕೇಂದ್ರ ಸರ್ಕಾರ ಹೆಚ್ಚುವರಿ ಸಕ್ಕರೆ ದಾಸ್ತಾನನ್ನು ಖಾಲಿ ಮಾಡಲು ನೆರವು ನೀಡುತ್ತಿದೆ. ಇದು ಪ್ರಧಾನಿ ಮೋದಿಯವರು ರೈತರ ಹಿತ ಕಾಪಾಡುವ ಕೆಲಸ ಮಾಡಿ ಕೃಷಿಗೆ ಉತ್ತೇಜನ ನೀಡುತ್ತಿರುವುದು ಹರ್ಷದಾಯಕವಾಗಿದೆ ಎಂದರು.
ಈ ವಿಶೇಷ ಪ್ಯಾಕೇಜದಿಂದ ಕಾರ್ಖಾನೆಗಳಲ್ಲಿ ದುಡಿಯುವ 5 ಲಕ್ಷ ಕಾರ್ಮಿಕರು, ಸಕ್ಕರೆಗೆ ಸಂಬಂಧಿಸಿದ ಇನ್ನಿತರ ಚಟುವಟಿಕೆಗಳಲ್ಲಿ ತೊಡಗಿರುವವರಿಗೂ ನೆರವು ಸಿಗಲಿದೆ ಎಂದರು. ಇದು ಸಕ್ಕರೆ ಕಾರ್ಖಾನೆಗಳಿಗೆ ಸಂದಾಯವಾಗುದಿಲ್ಲ ಕಬ್ಬು ಬೆಳೆಗಾರರ ಬ್ಯಾಂಕ್ ಉಳಿತಾಯ ಖಾತೆಗೆ ನೇರವಾಗಿ ಜಮೆ ಆಗಲಿದೆ ಎಂದರು.
Home / Recent Posts / ಕಬ್ಬು ಬೆಳೆಗಾರರು ಸಂಕಷ್ಟಕ್ಕೆ ಸಿಲುಕಬಾರದೆಂದು ರೂ.3500 ಕೋಟಿ ವಿಶೇಷ ಪ್ಯಾಕೇಜ್ ಘೋಷಿಸಿದ ಕೇಂದ್ರ ಸರ್ಕಾರ- ರಾಜ್ಯಸಭಾ ಸದಸ್ಯ ಹಾಗೂ ರೈತ ಮೋರ್ಚಾ ಅಧ್ಯಕ್ಷರಾದ ಈರಣ್ಣ ಕಡಾಡಿ
Check Also
ಖಾನಟ್ಟಿ ಹಾಲು ಉತ್ಪಾದಕರ ಸಹಕಾರಿ ಸಂಘಕ್ಕೆ ಉತ್ತಮ ಸಹಕಾರ ಸಂಘ ಪ್ರಶಸ್ತಿ
Spread the loveಮೂಡಲಗಿ : ಬೆಳಗಾವಿ ಜಿಲ್ಲಾ ಉತ್ತಮ ಸಹಕಾರಿ ಸಂಘ ಪ್ರಶಸ್ತಿ ಬೆಳಗಾವಿಯಲ್ಲಿ ನಡೆದ 71ನೇ ಅಖಿಲ ಭಾರತ …