Breaking News
Home / Recent Posts / ಡಿ.25 ರಿಂದ ಜ.10 ರವರೆಗೆ ರೈತರ ಕೃಷಿ ಜಮೀನುಗಳಿಗೆ 6.80 ಟಿಎಮ್‍ಸಿ ನೀರು ಬಿಡುಗಡೆ- ಶಾಸಕ ಹಾಗೂ ಕಹಾಮ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ

ಡಿ.25 ರಿಂದ ಜ.10 ರವರೆಗೆ ರೈತರ ಕೃಷಿ ಜಮೀನುಗಳಿಗೆ 6.80 ಟಿಎಮ್‍ಸಿ ನೀರು ಬಿಡುಗಡೆ- ಶಾಸಕ ಹಾಗೂ ಕಹಾಮ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ

Spread the love

ಡಿ.25 ರಿಂದ ಜ.10 ರವರೆಗೆ ರೈತರ ಕೃಷಿ ಜಮೀನುಗಳಿಗೆ 6.80 ಟಿಎಮ್‍ಸಿ ನೀರು ಬಿಡುಗಡೆ- ಶಾಸಕ ಹಾಗೂ ಕಹಾಮ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ

ಕಾಲುವೆಗೆ 550 ಕ್ಯೂಸೆಕ್ಸ್ ನೀರು ಬಿಡುಗಡೆಜಿಎಲ್‍ಬಿಸಗೆ 2400, ಜಿಆರ್‍ಬಿಸಿಗೆ 2000, ಸಿಬಿಸಿ

ಗೋಕಾಕ : ಹಿಡಕಲ್ ಜಲಾಶಯದಿಂದ ಡಿಸೆಂಬರ್ 25 ರಿಂದ 15 ದಿನಗಳವರೆಗೆ ರೈತರ ಕೃಷಿ ಜಮೀನುಗಳಿಗೆ ನೀರು ಹಾಯಿಸಲು 6.80 ಟಿಎಂಸಿ ನೀರು ಬಿಡುಗಡೆ ಮಾಡಲಾಗುತ್ತಿದೆ ಎಂದು ಕೆಎಂಎಫ್ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ತಿಳಿಸಿದ್ದಾರೆ.
ಜಲಸಂಪನ್ಮೂಲ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಅವರು ಈ ಬಗ್ಗೆ ಅಧಿಕಾರಿಗಳಿಗೆ ಆದೇಶ ನೀಡಿದ್ದು, ಶುಕ್ರವಾರ ಬೆಳಿಗ್ಗೆ 6 ಗಂಟೆಯಿಂದ ಹಿಡಕಲ್ ಜಲಾಶಯದಿಂದ ನೀರನ್ನು ಬಿಡುಗಡೆ ಮಾಡಲಾಗುವುದು ಎಂದು ಅವರು ಹೇಳಿದ್ದಾರೆ.
ಘಟಪ್ರಭಾ ಎಡದಂಡೆ ಕಾಲುವೆಗೆ 2400 ಕ್ಯೂಸೆಕ್ಸ್, ಘಟಪ್ರಭಾ ಬಲದಂಡೆ ಕಾಲುವೆಗೆ 2000 ಕ್ಯೂಸೆಕ್ಸ್ ಮತ್ತು ಸಿಬಿಸಿ ಕಾಲುವೆಗೆ 550 ಕ್ಯೂಸೆಕ್ಸ್ ನೀರನ್ನು ಬಿಡುಗಡೆ ಮಾಡಲಾಗುವುದು. ಡಿಸೆಂಬರ್ 25 ರಿಂದ ಜನೇವರಿ 10 ರವರೆಗೆ ಸುಮಾರು 6.80 ಟಿಎಂಸಿ ನೀರನ್ನು ಹರಿಸಲಾಗುತ್ತಿದೆ ಎಂದು ಅವರು ಹೇಳಿದ್ದಾರೆ.
ಗೋಕಾಕ, ಮೂಡಲಗಿ, ರಾಯಬಾಗ, ಮುಧೋಳ, ಬೀಳಗಿ, ಜಮಖಂಡಿ ತಾಲೂಕುಗಳ ರೈತರು ಇದರ ಸದ್ಬಳಕೆ ಮಾಡಿಕೊಳ್ಳಬೇಕು. ಅನಾವಶ್ಯಕವಾಗಿ ನೀರನ್ನು ಪೋಲು ಮಾಡಬಾರದು. ಕೃಷಿ ಜಮೀನುಗಳಿಗೆ ಅನುಕೂಲವಾಗಲು ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಅವರು ಹಿಡಕಲ್ ಜಲಾಶಯದಿಂದ ಎಲ್ಲ ಕಾಲುವೆಗಳಿಗೆ ನೀರು ಹರಿಸಲು ಅಧಿಕಾರಿಗಳಿಗೆ ಅವರು ಆದೇಶ ನೀಡಿದ್ದಾರೆಂದು ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ತಿಳಿಸಿದ್ದಾರೆ.


Spread the love

About inmudalgi

Check Also

*ಶಾಲಾ ಪ್ರಾರಂಭೋತ್ಸವದ ಸಕಲ ಸಿದ್ಧತೆ * ಮಕ್ಕಳಿಗೆ ಮತ್ತು ಪಾಲಕರಿಗೆ ವಿಶೇಷ ಊಟದ ವ್ಯವಸ್ಥೆ

Spread the loveಬೆಟಗೇರಿ ಸಿಆರ್‍ಸಿ ವಲಯದ ಶಾಲೆಗಳಲ್ಲಿ  ಸ್ವಚ್ಛತಾ  ಕಾರ್ಯ.! *ಎಲ್ಲ ಪ್ರಾಥಮಿಕ ಶಾಲೆಗಳಲ್ಲಿ ಮಕ್ಕಳಿಗೆ ಹೂ ನೀಡಿ, ಸಿಹಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ