ಕಲ್ಲೋಳಿ ಅಟಲ್ ಜೀ ಸ್ಮರಣೆ ಮತ್ತು ಕಿಸಾನ್ ಸನ್ಮಾನ್ ದಿನಾಚರಣೆ
ಮೂಡಲಗಿ: ಸಮೀಪದ ಕಲ್ಲೋಳಿ ಪಟ್ಟಣದ ಶ್ರೀ ಸತ್ಯಸಾಯಿ ಮಂದಿರದಲ್ಲಿ ಅಟಲ್ ಜೀ ಸ್ಮರಣೆ ಮತ್ತು ಕಿಸಾನ್ ಸನ್ಮಾನ್ ದಿನಾಚರಣೆಯನ್ನು ಡಿ.25 ರಂದು ಮುಂಜಾನೆ 10 ಗಂಟೆಗೆ ನಡೆಯಲಿದೆ. ಮಾಜಿ ಪ್ರಧಾನಿ, ಅಜಾತಶತ್ರು. ದಿ ಅಟಲ್ ಬಿಹಾರಿ ವಾಜಪೇಯ ಭಾವಚಿತ್ರಕ್ಕೆ ಪೂಜೆ ಮತ್ತು ಪುಷ್ಪಾಂಜಲಿಯನ್ನು ರಾಜ್ಯಸಭಾ ಸದಸ್ಯ ಹಾಗೂ ರೈತ ಮೋರ್ಚಾ ಅಧ್ಯಕ್ಷರಾದ ಈರಣ್ಣ ಕಡಾಡಿ ನಡೆಸಿಕೊಡಲಿದ್ದಾರೆ.
ಈ ಕಾರ್ಯಕ್ರಮದಲ್ಲಿ ಮುಖ್ಯಅತಿಥಿಗಳಾಗಿ ರಾಜ್ಯ ಬಿಜೆಪಿ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿಗಳಾದ ಡಾ|| ಮಲ್ಲಿಕಾರ್ಜುನ ಬಾಳಿಕಾಯಿ, ಕಾರ್ಯದರ್ಶಿ ಈರಣ್ಣ ಅಂಗಡಿ, ಉಪನ್ಯಾಸಕರಾಗಿ ಕೃಷಿ ವಿಜ್ಞಾನ ಕೇಂದ್ರ ತುಕ್ಕಾನಟ್ಟಿ ಕೃಷಿ ತಜ್ಞರಾದ ಮಾರುತಿ ಮಾಲವಾಡಿ ಭಾಗವಹಿಸುವರು.
ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ ಅಡಿಯಲ್ಲಿ 18,000 ಸಾವಿರ ಕೋಟಿ ರೂ ಗಳನ್ನು ನೇರವಾಗಿ 9 ಕೋಟಿ ರೈತ ಕುಟುಂಬಗಳ ಬ್ಯಾಂಕ್ ಖಾತೆಗಳಿಗೆ ವರ್ಗಾಯಿಸಿ ರೈತರನ್ನ್ ಉದ್ದೇಶಿಸಿ ಪ್ರಧಾನ ಮಂತ್ರಿಗಳ ಭಾಷಣದ ನೇರಪ್ರಸಾರದ ವೀಕ್ಷಣೆಯ ವ್ಯವಸ್ಥೆಯನ್ನು ರೈತರಿಗೆ ಮಾಡಲಾಗಿದೆ ಎಂದು ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದರು.