Breaking News
Home / Recent Posts / ಮೂಡಲಗಿ ತಾಲ್ಲೂಕಿನ ಹೊಸಟ್ಟಿ ಗ್ರಾಮದಲ್ಲಿ ಗಂಗಮ್ಮತಾಯಿ ಸಿದ್ದಪ್ಪ ನಾಯಿಕ ಅವರ ಪುಣ್ಯಸ್ಮರಣೆ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭ

ಮೂಡಲಗಿ ತಾಲ್ಲೂಕಿನ ಹೊಸಟ್ಟಿ ಗ್ರಾಮದಲ್ಲಿ ಗಂಗಮ್ಮತಾಯಿ ಸಿದ್ದಪ್ಪ ನಾಯಿಕ ಅವರ ಪುಣ್ಯಸ್ಮರಣೆ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭ

Spread the love

ಮೂಡಲಗಿ ತಾಲ್ಲೂಕಿನ ಹೊಸಟ್ಟಿ ಗ್ರಾಮದಲ್ಲಿ ಗಂಗಮ್ಮತಾಯಿ ಸಿದ್ದಪ್ಪ ನಾಯಿಕ ಅವರ ಪುಣ್ಯಸ್ಮರಣೆ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಕರ್ನಲ್ ಪರುಶರಾಮ ನಾಯಿಕ ಹಾಗೂ ವಿದ್ಯಾರ್ಥಿಗಳು ಮತ್ತು ಪಾಲಕರು ಚಿತ್ರದಲ್ಲಿರುವರು
ಕರ್ನಲ್ ಡಾ. ಪರುಶರಾಮ ನಾಯಿಕ ಅಭಿಮತ
ಹೆಣ್ಣು ಮಕ್ಕಳ ಶಿಕ್ಷಣಕ್ಕೆ ಆದ್ಯತೆ ದೊರೆಯಲಿ

ಮೂಡಲಗಿ: ಹೆಣ್ಣು ಮಕ್ಕಳು ಶಿಕ್ಷಣ ಪಡೆಯುವುದರಿಂದ ಸಮಾಜಕ್ಕೆ ಬಹುದೊಡ್ಡ ಕೊಡುಗೆಯಾಗುತ್ತದೆ. ಹೆಣ್ಣು ಮಕ್ಕಳನ್ನು ಶಿಕ್ಷಣದಿಂದ ವಂಚಿತಗೊಳಿಸಬಾರದು’ ಎಂದು ಕರ್ನಲ್ ಡಾ. ಪರುಶರಾಮ ನಾಯಿಕ ಹೇಳಿದರು.
ತಾಲ್ಲೂಕಿನ ಹೊಸಟ್ಟಿ ಗ್ರಾಮದಲ್ಲಿ ಗಂಗಮ್ಮತಾಯಿ ಸಿದ್ದಪ್ಪ ನಾಯಿಕ ಇವರ ಸ್ಮರಣಾರ್ಥವಾಗಿ ಪ್ರತಿ ವರ್ಷ ಪುಣ್ಯಸ್ಮರಣೆ ದಿನ ಕೊಡುವ ರೂ. 10 ಸಾವಿರ ನಗದು ಹಣ ಹಾಗೂ ಪ್ರಶಸ್ತಿ ಪತ್ರ ವಿತರಣೆ ಸಮಾರಂಭದಲ್ಲಿ ಮಾತನಾಡಿದ ಅವರು ಗ್ರಾಮೀಣ ಹೆಣ್ಣು ಮಕ್ಕಳ ಉನ್ನತ ಶಿಕ್ಷಣವನ್ನು ಕಲಿಯಲಿಕ್ಕೆ ಪಾಲಕರು ಅನುಕೂಲ ಮಾಡಿಕೊಡಬೇಕು ಎಂದರು.
ಶಿಕ್ಷಣ ಪ್ರೇಮಿಯಾಗಿದ್ದ ಮಾತೋಶ್ರೀ ಗಂಗಮ್ಮತಾಯಿ ನಾಯಿಕ ಅವರ ಹೆಸರಲ್ಲಿ ಹೊಸಟ್ಟಿ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ 7ನೇ ತರಗತಿಯಲ್ಲಿ ಅತೀ ಹೆಚ್ಚು ಅಂಕಗಳನ್ನು ಪಡೆದುಕೊಳ್ಳುವ ಹೆಣ್ಣು ಮಕ್ಕಳಿಗೆ ನಗದು ಹಣವನ್ನು ಕೊಡುತ್ತಿದ್ದು, ಹೆಣ್ಣು ಮಕ್ಕಳ ಶಿಕ್ಷಣಕ್ಕೆ ತಮ್ಮ ತಾಯಿ ನೆನಪಿನಲ್ಲಿ ಪ್ರತಿ ವರ್ಷವೂ ಮುಂದುವರಿಯುವುದು ಎಂದರು.
ಪ್ರಸಕ್ತ ವರ್ಷದ 7ನೇ ತರಗತಿಯ ಫಲಿತಾಂಶದಲ್ಲಿ ಅನಿತಾ ರಾಮಪ್ಪ ತಿಪ್ಪೇರ ಮತ್ತು ಕಾವೇರಿ ಮಾಳಪ್ಪ ಕಾರದಗಿ ಇಬ್ಬರು ಅತೀ ಹೆಚ್ಚು ಅಂಕಗಳನ್ನು ಪಡೆದುಕೊಂಡಿದ್ದರಿಂದ ತಲಾ ರೂ. 5 ಸಾವಿರ ನಗದು ಹಣವನ್ನು ಸಮಾರಂಭದಲ್ಲಿ ವಿತರಿಸಿದರು.
ಶಾಲೆಯ ಎಸ್‍ಡಿಎಂಸಿ ಪದಾಧಿಕಾರಿಗಳು, ಗ್ರಾಮದ ಹಿರಿಯರು, ಶಿಕ್ಷಕರು ಭಾಗವಹಿಸಿದ್ದರು.
ವಿದ್ಯಾರ್ಥಿಗಳಿಗೆ ನಗದು: ಕಾರ್ಯಕ್ರಮದಿಂದ ಪ್ರೇರಣೆಗೊಂಡು ಅರ್ಜುನ ಮಹಾದೇವ ನಾಯಿಕ ಅವರು ಬರುವ ವರ್ಷದಿಂದ ಹೊಸಟ್ಟಿ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ 7ನೇ ತರಗತಿಯಲ್ಲಿ ಅತೀ ಹೆಚ್ಚು ಅಂಕಗಳನ್ನು ಪಡೆದುಕೊಳ್ಳುವ ವಿದ್ಯಾರ್ಥಿಗೆ ರೂ. 5 ಸಾವಿರ ನಗದು ಕೊಡುವುದಾಗಿ ಪ್ರಕಟಿಸಿದರು.


Spread the love

About inmudalgi

Check Also

ಬಸವಣ್ಣನವರು ಸಕಲ ಜೀವಿಗಳಿಗೆ ಶ್ರೇಯಸ್ಸು ಬಯಸಿದ್ದರು: ಬಸವಂತ ಕೋಣಿ

Spread the loveವರದಿ: ಅಡಿವೇಶ ಮುಧೋಳ. ಬೆಟಗೇರಿ:ಸಮಾಜದಲ್ಲಿ ಸಮಾನತೆ ತರಲು ಶ್ರಮಿಸಿದ ಬಸವಣ್ಣನವರು ವಿಶ್ವದ ಬಹುದೊಡ್ಡ ಸಮಾಜ ಸುಧಾರಕರಾಗಿದ್ದಾರೆ. ಬಸವಣ್ಣನವರು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ