Breaking News
Home / Recent Posts / ಸ್ವಾಮಿ ವಿವೇಕಾನಂದರ ಅವರ ಜನ್ಮದಿನವನ್ನು ರಾಷ್ಟೀಯ ಯುವದಿನವನ್ನಾಗಿ ಆಚರಿಸುತ್ತಿದ್ದೇವೆ -ಜಿಪಂ ಸದಸ್ಯೆ ವಾಸಂತಿ ತೇರದಾಳ

ಸ್ವಾಮಿ ವಿವೇಕಾನಂದರ ಅವರ ಜನ್ಮದಿನವನ್ನು ರಾಷ್ಟೀಯ ಯುವದಿನವನ್ನಾಗಿ ಆಚರಿಸುತ್ತಿದ್ದೇವೆ -ಜಿಪಂ ಸದಸ್ಯೆ ವಾಸಂತಿ ತೇರದಾಳ

Spread the love

ಸನ್ಯಾಸಿಯೊಬ್ಬರ ಜನ್ಮದಿನ ಯುವದಿನವನ್ನಾಗಿ ಆಚರಿಸುವುದೇ ಸ್ವಾರಸ್ಯಕರ- ವಾಸಂತಿ ತೇರದಾಳ

ಮೂಡಲಗಿ : ಆಧುನಿಕ ಕಾಲದಲ್ಲಿ ಭಾರತೀಯತೆಯ ಅಸ್ಮಿತೆಯನ್ನು ಒದಗಿಸಿದ ಪ್ರಮುಖರಲ್ಲಿ ಒಬ್ಬರು ಸನ್ಯಾಸಿಯಾದ ಸ್ವಾಮಿ ವಿವೇಕಾನಂದರ ಅವರ ಜನ್ಮದಿನವನ್ನು ರಾಷ್ಟ್ರೀಯ ಯುವದಿನವನ್ನಾಗಿ ಆಚರಿಸುತ್ತಿದ್ದೇವೆ. ಅವರು ಒದಗಿಸಿದ ಭಾರತೀಯತೆಯ ಸತ್ವ ಎಂಥದ್ದು ಎಂಬುದನ್ನು ಅವರ ಜನ್ಮದಿನದ ಆಚರಣೆಯೂ ಧ್ವನಿಸುವಂತಿದೆ ಎಂದು ಹಳ್ಳೂರ ಜಿಪಂ ಸದಸ್ಯೆ ವಾಸಂತಿ ತೇರದಾಳ ಹೇಳಿದರು.

ಪಟ್ಟಣದ ಗಾರ್ಡನ್ ಅಭಿವೃದ್ಧಿ ಸಂಸ್ಥೆ, ಜೈ ಕರ್ನಾಟಕ ಅಂಗವಿಕಲರ ಗ್ರಾಮೀಣ ಅಭಿವೃದ್ಧಿ ಸಂಘ, ಮಂಜುನಾತ ಸೈನಿಕ ತರಬೇತಿ ಕೇಂದ್ರ, ಯುವ ಜೀವನ ಸೇವಾ ಸಂಸ್ಥೆ, ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟ ಬೆಳಗಾವಿ ಹಾಗೂ ಭಾರತ ಸರ್ಕಾರದ ನೆಹರು ಯುವ ಕೇಂದ್ರ, ಹಾಗೂ ಯುವ ಸಬಲಿಕರಣ ಮತ್ತು ಕ್ರೀಡಾ ಇಲಾಖೆ ಬೆಳಗಾವಿ ಇವರ ಸಂಯುಕ್ತ ಆಶ್ರಯದಲ್ಲಿ ಜರುಗಿದ ಸ್ವಾಮಿ ವಿವೇಕಾನಂದರ 158ನೇ ಜಯಂತಿ ಮತ್ತು ರಾಷ್ಟ್ರೀಯ ಯುವ ಸಪ್ತಾಹ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಮೊದಲ ಬಾರಿಗೆ ಜಗತ್ತಿನ ಎದುರಿನಲ್ಲಿ ಸ್ವಾಮಿ ವಿವೇಕಾನಂದರು ಭಾರತೀಯತೆಯನ್ನು ವ್ಯಾಖ್ಯಾನಿಸಿದ ಪರಿಯೇ ಅಪೂರ್ವವಾದುದು ಎಂದರು.

ಸ್ವಾಮಿ ವಿವೇಕಾನಂದ ರಾಜ್ಯ ಯುವ ಪ್ರಶಸ್ತಿ ವಿಜೇತ ಸಿದ್ದಣ್ಣ ದುರದುಂಡಿ ಮಾತನಾಡಿ, ಯುವ ಜನತೆಗೆ ಸ್ಫೂರ್ತಿಯ ಚಿಲುಮೆಯಂತಿದ್ದ ವಿವೇಕಾನಂದರ ಚಿಂತನೆ, ಸಂದೇಶಗಳು ಎಂದೆಂದಿಗೂ ಪ್ರಸ್ತುತ. ಸ್ವಾ,ಮಿ ವಿವೇಕಾನಂದರ ಜೀವನ, ಸಂದೇಶಗಳಲ್ಲಿ ವಿಷೇಶವಾಗಿ ಯುವಜನರ ಮೇಲೆ ಪ್ರಭಾವ ಬೀರುವ, ಬಾಳು ಬೆಳಗುವ ಅಂಶಗಳಿವೆ. ರಾಷ್ಟಪ್ರೇಮ, ಭಾರತೀಯ ಸಂಸ್ಕøತಿಯ ಅಪಾರ ಜ್ಞಾನ ಸಂಪತ್ತನ್ನು ದೇಶದ ಮೂಲೆ ಮೂಲೆಗೆ ಸಂಚರಿಸಿ ಎಲ್ಲರಿಗೂ ಸ್ಫೂರ್ತಿ ತುಂಬಿದ್ದರು ಎಂದು ಹೇಳಿದರು.

ಕಾರ್ಯಕ್ರಮದ ಸಾನಿಧ್ಯ ವಹಿಸಿದ ಇಟನಾಳದ ಸಿದ್ದೇಶ್ವರ ಸ್ವಾಮಿಜಿ ಮಾತನಾಡಿ, ಅಲ್ಪಾವಧಿಯ ಭಾಷಣದಲ್ಲಿ ವಿವೇಕಾನಂದರು ಎಷ್ಟೊಂದು ಸಂಗತಿಗಳ ಬಗ್ಗೆ ಮಾತನಾಡಿದ್ದಾರೆ ಎನ್ನುವುದನ್ನು ಗಮನಿಸಿದರೆ ನಮಗೆ ಆಚ್ಚರಿಯಾಗದಿರದು ಅವರ ಮಾತಿನಲ್ಲಿ ಸ್ಪಷ್ಟತೆ, ಗುರಿ, ಹಿಂದೆ ಗುರು, ಹೊಣೆಗರಿಕೆಯ ಗುರುತ್ವವೂ ಇದೆ ಆದರಿಂದ ನಾವಿಂದು ವಿವೇಕಾನಂದರ ಉಪದೇಶಗಳನ್ನು ಹೇಗೆ ನಾವು ಉಪಯೋಗಿಸಿಕೊಳ್ಳುತ್ತಿದ್ದೇವೆ ಎಂಬುದರ ಬಗ್ಗೆ ಆತ್ಮಾವಲೋಕನ ಮಾಡಿಕೊಳ್ಳಬೇಕು. ಅವರು ಯುವಕರಿಗೆ ಹೇಳಿರುವ ಏಳಿ ಏದ್ದೇಳಿ, ಗುರಿ ಮುಟ್ಟುವ ತನಕ ನಿಲ್ಲದಿರಿ ಎಂಬ ವಾಕ್ಯದ ಅರ್ಥವನ್ನು ಯುವಕರು ಅರಿತುಕೊಂಡು ಸಾಗಿದರೆ ಮುಂದೆ ಒಳ್ಳೆಯ ಜೀವನವನ್ನು ಕಾಣಬಹುದು ಎಂದು ಹೇಳಿದರು.

ಈ ಸಂದರ್ಭದಲ್ಲಿ ವಿವೇಕಾನಂದರ ಜಯಂತಿ ನಿಮಿತ್ಯವಾಗಿ ಕ್ರೀಕೆಟ್, ಭಾಷಣ ಸ್ಪರ್ಧೆ, ಗಾಯನ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರ ವಿತರಿಸಿ, ಮೂಡಲಗಿ ಪ್ರೆಸ್‍ಕ್ಲಬ್‍ಗೆ ಅವಿರೋಧವಾಗಿ ಆಯ್ಕೆಯಾದ ಲಕ್ಷ್ಮಣ ಅಡಿಹುಡಿ, ಅಲ್ತಾಫ್ ಹವಾಲ್ದಾರ, ಸುಭಾಸ ಗೊಡ್ಯಾಗೋಳ, ಮಹಾದೇವ ನಡುವಿನಕೇರಿ, ಶಿವಾನಂದ ಹಿರೇಮಠ ಅವರನ್ನು ಸತ್ಕರಿ ಗೌರವಿಸಿದರು.

ಮೂಡಲಗಿ ಪ್ರೆಸ್‍ಕ್ಲಬ್ ಅಧ್ಯಕ್ಷ ಲಕ್ಷ್ಮಣ ಅಡಿಹುಡಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು, ಮೂಡಲಗಿ ಪುರಸಭೆ ಅಧ್ಯಕ್ಷ ಹಣಮಂತ ಗುಡ್ಲಮನಿ, ತಾಪಂ ಸದಸ್ಯೆ ಸವಿತಾ ಡಬ್ಬನ್ನವರ, ಜನನಿ ಅಭಿವೃದ್ದಿ ಸಂಸ್ಥೆಯ ಕಾರ್ಯದರ್ಶಿ ಆನಂದ ಸುಳ್ಳನವರ, ಯುವ ಜೀವನ ಸೇವಾ ಸಂಸ್ಥೆಯ ಅಧ್ಯಕ್ಷ ಈರಪ್ಪ ಢವಳೇಶ್ವರ, ಗಾರ್ಡನ ಅಭಿವೃದ್ದಿ ಸಂಸ್ಥೆ ಕಾರ್ಯದರ್ಶಿ ಸುಭಾಷ ಗೊಡ್ಯಾಗೋಳ, ರಮೇಶ ಉಪ್ಪಾರ, ಮಂಜುನಾಥ ಹೆಳವರ, ಈರಣ್ಣ ಮೊಡಿ, ಯಲ್ಲಪ್ಪ ಸಣ್ಣಕ್ಕಿ, ಹಾಲಪ್ಪ ಗಡ್ಡೇಕಾರ ಹಾಗೂ ಪತ್ರಕರ್ತರಾದ ಮಲ್ಲು ಬೋಳನವರ, ಭಗವಂತ ಉಪ್ಪಾರ, ಗುರು ಗಂಗನ್ನವರ, ಮತ್ತು ಸೈನಿಕ ಕೇಂದ್ರದ ಶಿಬಿರಾರ್ಥಿಗಳು, ಸಂಘ ಸಂಸ್ಥೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.


Spread the love

About inmudalgi

Check Also

‘ಮೂಡಲಗಿಯಲ್ಲಿ ನ.23-24 ರಂದು 16ನೇ ಜಿಲ್ಲಾ ಸಾಹಿತ್ಯ ಸಮ್ಮೇಳನ’

Spread the love‘ಮೂಡಲಗಿಯಲ್ಲಿ ನ.23-24 ರಂದು 16ನೇ ಜಿಲ್ಲಾ ಸಾಹಿತ್ಯ ಸಮ್ಮೇಳನ’ ಜನಮನ ಸೇಳೆದ ಕನ್ನಡ ಬುತ್ತಿ ಜಾತ್ರೆ ಕಾರ್ಯಕ್ರಮ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ