ವಿಕಲಚೇತನರಿಗೆ ತ್ರೀಚಕ್ರ ವಾಹನ(ಬೈಕ್)ಗಳನ್ನು ವಿತರಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ
ಗೋಕಾಕ : ವಿಕಲಚೇತನರು ಮುಖ್ಯ ವಾಹಿನಿಗೆ ತರಲು ಸರ್ಕಾರ ಸಾಕಷ್ಟು ಯೋಜನೆಗಳನ್ನು ರೂಪಿಸಿದ್ದು, ಅವುಗಳನ್ನು ಸದ್ಬಳಕೆ ಮಾಡಿಕೊಳ್ಳುವಂತೆ ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು.
ಗುರುವಾರ ಸಂಜೆ ಇಲ್ಲಿಯ ಎನ್‌ಎಸ್‌ಎಫ್ ಅತಿಥಿ ಗೃಹದಲ್ಲಿ ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆಯಿಂದ ವಿಕಲಚೇತನರಿಗೆ ತ್ರಿಚಕ್ರ ವಾಹನಗಳನ್ನು ವಿತರಿಸಿ ಅವರು ಮಾತನಾಡಿದರು.
ವಿಕಲಚೇತನರನ್ನು ಸಮಾಜ ಗೌರವದಿಂದ ನಡೆಸಿಕೊಳ್ಳಬೇಕು. ಅವರ ಬಗ್ಗೆ ಕೀಳುರಿಮೆ ಮಾಡದೇ ಆದರದಿಂದ ನೋಡಿಕೊಳ್ಳಬೇಕು. ವಿಕಲಚೇತನರ ಪ್ರಗತಿಗಾಗಿ ಹಾಗೂ ಅವರ ಆರ್ಥಿಕಮಟ್ಟ ಸುಧಾರಿಸುವ ಹಿನ್ನೆಲೆಯಲ್ಲಿ ಸ್ವಾವಲಂಬಿ ಬದುಕು ಸಾಗಿಸಲು ಸರ್ಕಾರ ಸಾಕಷ್ಟು ಯೋಜನೆಗಳನ್ನು ಅನುಷ್ಠಾನ ಮಾಡಿದೆ. ಅಂತಹ ಯೋಜನೆಗಳನ್ನು ಪಡೆದುಕೊಳ್ಳಲು ಮುಂದೆ ಬರಬೇಕು. ವಿಕಲಚೇತನರ ಸಂಬAಧಿಸಿದ ಯೋಜನೆಗಳ ಕಾರ್ಯರೂಪಕ್ಕೆ ಅಧಿಕಾರಿಗಳು ತ್ವರಿತಗತಿಯಲ್ಲಿ ತರಲು ಪ್ರಯತ್ನಿಸಬೇಕು ಎಂದು ಹೇಳಿದರು.
ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಇದೇ ಸಂದರ್ಭದಲ್ಲಿ ಅರಭಾವಿ ಮತಕ್ಷೇತ್ರದ 15 ವಿಕಲಚೇತನರಿಗೆ ತ್ರೀಚಕ್ರ ವಾಹನ(ಬೈಕ್)ಗಳನ್ನು ವಿತರಿಸಿದರು.
ಈ ಸಂದರ್ಭದಲ್ಲಿ ಜಿಪಂ ಸದಸ್ಯ ಗೋವಿಂದ ಕೊಪ್ಪದ, ಪ್ರಭಾಶುಗರ ಉಪಾಧ್ಯಕ್ಷ ರಾಮಣ್ಣಾ ಮಹಾರಡ್ಡಿ, ತಾಪಂ ಸದಸ್ಯ ಗೋಪಾಲ ಕುದರಿ, ಟಿಎಪಿಸಿಎಂಎಸ್ ನಿರ್ದೇಶಕ ವೆಂಕನಗೌಡ ಪಾಟೀಲ, ಬಸಲಿಂಗ ಕೆಳಗಡೆ, ಶಿವಾನಂದ ದೊಡಕೆಂಚನವರ, ವಕೀಲ ಅಡಿವೆಪ್ಪ ಬಿಲಕುಂದಿ, ವಿಕಲಚೇತನ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆಯ ಸಹಾಯಕ ನಿರ್ದೇಶಕ ಆರ್.ಬಿ. ಬನಶಂಕರಿ, ನೋಡಲ್ ಅಧಿಕಾರಿ ಉಮಾ ಬಳ್ಳೊಳ್ಳಿ, ಶಮಶುದ್ದೀನ ಖೈರದಿ, ಸೇರಿದಂತೆ ಹಲವರು ಉಪಸ್ಥಿತರಿದ್ದರು.