Breaking News
Home / Recent Posts / ‘ದೇಶದ ಪ್ರತಿಯೊಬ್ಬ ಪ್ರಜೆಯು ಕಡ್ಡಾಯವಾಗಿ ಮತದಾನವನ್ನು ಮಾಡುವ ಮೂಲಕ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಸದೃಢಗೊಳಿಸಬೇಕು’

‘ದೇಶದ ಪ್ರತಿಯೊಬ್ಬ ಪ್ರಜೆಯು ಕಡ್ಡಾಯವಾಗಿ ಮತದಾನವನ್ನು ಮಾಡುವ ಮೂಲಕ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಸದೃಢಗೊಳಿಸಬೇಕು’

Spread the love

‘ಮತದಾನ ಮಾಡಿ ಪ್ರಜಾಪ್ರಭುತ್ವ ವ್ಯವಸ್ಥೆ ಸದೃಢಗೊಳಿಸಬೇಕು

ಮೂಡಲಗಿ: ಪಟ್ಟಣದ ಮೂಡಲಗಿ ಶಿಕ್ಷಣ ಸಂಸ್ಥೆಯ ಕಲಾ ಹಾಗೂ ವಾಣಿಜ್ಯ ಮಹಾವಿದ್ಯಾಲಯ ಮತ್ತು ತಾಲೂಕಾ ಕಾನೂನು ಸೇವೆಗಳ ಸಮೀತಿ, ಮೂಡಲಗಿ ನ್ಯಾಯವಾದಿಗಳ ಸಂಘ, ತಾಲೂಕಾ ಆಡಳಿತ ಮತ್ತು ಶಿಕ್ಷಣ ಇಲಾಖೆ ಆಶ್ರಯದಲ್ಲಿ ಕಲಾ ಹಾಗೂ ವಾಣಿಜ್ಯ ಮಹಾವಿದ್ಯಾಲಯದ ಸಭಾ ಭವನದಲ್ಲಿ 11ನೇ ರಾಷ್ಟ್ರೀಯ ಮತದಾರರ ದಿನಾಚರಣೆ ಕಾರ್ಯಕ್ರಮ ಜರುಗಿತು.
ಸ್ಥಳಿಯ ದಿವಾಣಿ ಹಾಗೂ ಜೆ.ಎಮ್.ಎಫ್.ಸಿ ನ್ಯಾಯಾಲಯದ ನ್ಯಾಯಾಧೀಶರಾದ ಸುರೇಶ ಎಸ್.ಎನ್ ಅವರು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ ‘ದೇಶದ ಪ್ರತಿಯೊಬ್ಬ ಪ್ರಜೆಯು ಕಡ್ಡಾಯವಾಗಿ ಮತದಾನವನ್ನು ಮಾಡುವ ಮೂಲಕ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಸದೃಢಗೊಳಿಸಬೇಕು’ ಎಂದರು.
18ವರ್ಷ ತುಂಬಿದ ಪ್ರತಿಯೋಬ್ಬರು ತಮ್ಮ ಹೆಸರನ್ನು ಮತದಾರರ ಪಟ್ಟಿಯಲ್ಲಿ ಸೇರ್ಪಡಿಸಿಬೇಕು. ದೇಶದ ಪ್ರಗತಿಗಾಗಿ ಉತ್ತಮ ಹಾಗೂ ಅರ್ಹ ಪ್ರತಿನಿಧಿಗಳನ್ನು ಚುನಾವಣೆಯಲ್ಲಿ ಆಯ್ಕೆ ಮಾಡಬೇಕು ಎಂದರು.
ಮತದಾನವು ಸಂವಿಧಾನಬದ್ಧ ಹಕ್ಕು ಆಗಿದ್ದು, ಯಾರೋಬ್ಬರು ಯಾವುದೇ ಆಸೆ, ಆಮೀಷಗಳಿಗೆ ಬಲಿಯಾಗದೇ ತಮ್ಮ ಮತವನ್ನು ಚಲಾಯಿಸಬೇಕು ಎಂದರು.
ನ್ಯಾಯಾಧೀಶರು ಮತದಾನ ಮಾಡುವ ಬಗ್ಗೆ ಪ್ರತಿಜ್ಞಾ ವಿಧಿ ಬೋಧಿಸಿದರು.
ಮುಖ್ಯ ಅತಿಥಿ ತಹಶೀಲ್ದಾರ್ ಡಿ.ಜೆ. ಮಹಾತ್ ಮಾತನಾಡಿ ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಗೆ ಅವಶ್ಯವಿರುವ ಮತದಾನದ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಬೇಕು ಎಂದರು.
ಅಧ್ಯಕ್ಷೆವಹಿಸಿದ್ದ ಮೂಡಲಗಿ ಶಿಕ್ಷಣ ಸಂಸ್ಥೆ ಅಧ್ಯಕ್ಷ ವಿಜಯಕುಮಾರ ಸೋನವಾಲಕರ ಮಾತನಾಡಿ ಮತದಾನವು ಪವಿತ್ರವಾದ ಕಾರ್ಯವಾಗಿದ್ದು, ಪ್ರಜಾಪ್ರಭುತ್ವ ಆಶಯದ ಯಶಸ್ಸಿಗೆ ಕಡ್ಡಾಯ ಮತದಾನ ಮುಖ್ಯವಾಗಿದೆ ಎಂದರು.
ಚುನಾವಣಾ ಸಾಕ್ಷರತಾ ಸಂಘದ ಸಂಚಾಲಕರಾದ ಪ್ರೊ.ಎಸ್.ಎ.ಶಾಸ್ತ್ರೀಮಠ ರಾಷ್ಟ್ರೀಯ ಮತದಾರರ ದಿನಾಚರಣೆ ಕುರಿತು ಮಾತನಾಡಿದರು.
ಮೂಡಲಗಿ ತಾಲೂಕಾ ನ್ಯಾಯವಾದಿಗಳ ಸಂಘದ ಅಧ್ಯಕ್ಷ ಕೆಂಪ್ಪಣ್ಣ ಮಗದುಮ್, ನ್ಯಾಯವಾದಿಗಳಾದ ಎಸ್.ವಾಯ್.ಹೊಸಟ್ಟಿ, ಎಲ್.ವಾಯ್.ಅಡಿಹುಡಿ, ಡಿ.ಎಸ್.ರೋಡ್ಡನ್ನವರ, ವ್ಹಿ.ಕೆ.ಪಾಟೀಲ, ಶಿಕ್ಷಣ ಇಲಾಖೆಯ ಶಿಕ್ಷಣ ಸಂಯೋಜಕ ಸತೀಶ ಭಾಗವಹಿಸಿದರು.
ಕಾರ್ಯಕ್ರಮದಲ್ಲಿ ಮಹಾವಿದ್ಯಾಲಯದ ಉಪನ್ಯಾಸಕರು, ನ್ಯಾಯವಾದಿಗಳು ಮತ್ತು ವಿದ್ಯಾರ್ಥಿಗಳು ಇದ್ದರು.
ಮಹಾವಿದ್ಯಾಲಯದ ಪ್ರಾಚಾರ್ಯ ಡಾ.ಆರ್.ಎ.ಶಾಸ್ತ್ರೀಮಠ ಸ್ವಾಗತಿಸಿದರು, ಪ್ರೊ.ಜಿ.ಸಿದ್ರಾಮರಡ್ಡಿ ವಂದಿಸಿದರು.


Spread the love

About inmudalgi

Check Also

ಅಕ್ಷರ ದಾಸೋಹ ಯೋಜನೆ : ಬಡಮಕ್ಕಳಿಗೆ ವರದಾನ -ಅಶೋಕ ಮಲಬಣ್ಣವರ

Spread the loveಅಕ್ಷರ ದಾಸೋಹ ಯೋಜನೆ : ಬಡಮಕ್ಕಳಿಗೆ ವರದಾನ -ಅಶೋಕ ಮಲಬಣ್ಣವರ ಮೂಡಲಗಿ: ಕೇಂದ್ರ ಹಾಗೂ ರಾಜ್ಯ ಸರಕಾರದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ