Breaking News
Home / Recent Posts / ಅಂಬೇಡ್ಕರ್ ಅವರ ಬದುಕು ಬರಹಗಳನ್ನು ನಾವೆಲ್ಲಾ ನಿಜವಾಗಿ ಓದಿ ಅರ್ಥೈಸಿಕೊಳ್ಳಬೇಕಿದೆ – ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕಿ ವಿದ್ಯಾವತಿ ಭಜಂತ್ರಿ

ಅಂಬೇಡ್ಕರ್ ಅವರ ಬದುಕು ಬರಹಗಳನ್ನು ನಾವೆಲ್ಲಾ ನಿಜವಾಗಿ ಓದಿ ಅರ್ಥೈಸಿಕೊಳ್ಳಬೇಕಿದೆ – ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕಿ ವಿದ್ಯಾವತಿ ಭಜಂತ್ರಿ

Spread the love

ಮೂಡಲಗಿ: “ದೇಶ ಕಂಡ ಮಹಾನ್ ವ್ಯಕ್ತಿತ್ವದ ಅಂಬೇಡ್ಕರ್ ಅವರ ಬದುಕು ಬರಹಗಳನ್ನು ನಾವೆಲ್ಲಾ ನಿಜವಾಗಿ ಓದಿ ಅರ್ಥೈಸಿಕೊಳ್ಳಬೇಕಿದೆ ಈ ನಿಟ್ಟಿನಲ್ಲಿ ನಡೆದ ಅಂಬೇಡ್ಕರ್ ಓದು ಕಾರ್ಯಕ್ರಮ ಅರ್ಥಪೂರ್ಣವಾಗಿದೆ” ಎಂದು ಬೆಳಗಾವಿ ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕಿ ವಿದ್ಯಾವತಿ ಭಜಂತ್ರಿ ಹೇಳಿದರು.

ಅವರು ತಾಲೂಕಿನ ವಡೆರಹಟ್ಟಿ ಗ್ರಾಮದ ಸರಕಾರಿ ಪದವಿ ಪೂರ್ವ ಮಹಾವಿದ್ಯಾಲಯ ಹಾಗೂ ಬೆಳಗಾವಿಯ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಇವರ ಸಂಯುಕ್ರ ಆಶ್ರಯದಲ್ಲಿ ನಡೆದ ಡಾ.ಬಿ.ಆರ್. ಅಂಬೇಡ್ಕರ್ ಓದು ಕಾರ್ಯಕ್ರಮವನ್ನು  ಸಸಿಗೆ ನೀರು ಉನಿಸುವ ಮೂಲಕ ಉದ್ಘಾಟಿಸಿ ಮಾತನಾಡಿ, ಅಂಬೇಡ್ಕರ್ ಅವರ ಚಿಂತನೆಗಳು ನಮಗೆಲ್ಲಾ ಸ್ಪೂರ್ತಿಯಾಗಿದ್ದು ಅವರನ್ನು ಸಮಗ್ರವಾಗಿ ಅರಿಯುವ ಕಾರ್ಯವನ್ನು ನಮ್ಮ ಕನ್ನಡ ಸಂಸ್ಕøತಿ ಇಲಾಖೆ ಮಾಡುತ್ತಿದೆ ಅದರ ಸದುಪಯೋಗ ಪಡೆದು ವಿದ್ಯಾರ್ಥಿಗಳು ಯಶಸ್ವಿಯಾಗಿ” ಹಾಗೂ ಅವರು ನೀಡಿದ ಸಮಾನತೆಯ ತತ್ವಗಳು ಇಂದು ಎಲ್ಲಾ ಜನಾಂಗದವರಿಗೆ ಸಮಾನ ಅವಕಾಶಗಳನ್ನು ಕಲ್ಪಿಸಿದೆ ಅವರನ್ನು ಎಲ್ಲರೂ ಅರಿತುಕೊಳ್ಳುವ ಒಂದು ಸುಕಾರ್ಯವೇ ಈ ಅಂಬೇಡ್ಕರ್ ಓದು ಕಾರ್ಯಕ್ರಮವಾಗಿದೆ ಎಂದು ತಿಳಿಸಿದ್ದರು.

ಅತಿಥಿಗಳಾದ ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟದ ಬೆಳಗಾವಿ ಜಿಲ್ಲಾಧ್ಯಕ್ಷ ಸಿದ್ದಣ್ಣ ದುರದುಂಡಿ ಮಾತನಾಡಿ, ಡಾ: ಬಾಬಾಸಾಹೇಬ ಅಂಬೇಡ್ಕರ ಅವರ ತತ್ವಾದರ್ಶಗಳನ್ನು ಮತ್ತು ಸಂವಿಧಾನದ ಮೂಲಕ ನೀಡಿದ ಕೋಡುಗೆಗಳನ್ನು ಸಮರ್ಥವಾಗಿ ಬಳಸಿಕೊಳಸಿಕೊಂಡು ಸಮಾಜದಲ್ಲಿ ಉತ್ತಮ ನಾಗರಿಕರಾಗಿ ಬಾಳ ಬೇಕೆಂದರು.
ಪ್ರಾಂಶುಪಾಲ ಶಶಿಕಾಂತ ಬಾಗೋಜಿ ಅಧ್ಯಕ್ಷತೆ ವಹಿಸಿ ಮಾತನಾಡಿ, ಅಂಬೇಡ್ಕರ ಅವರು ನಮ್ಮ ದೇಶಕ್ಕೆ ಒಂದು ದೊಡ್ಡ ಶಕ್ತಿಯಾಗಿದ್ದು ಅವರನ್ನು ಅರಿತುಕೊಳ್ಳಲು ಕನ್ನಡ ಮತ್ತು ಸಂಸ್ಕøತಿ ಇಲಾಖೆ ಹಾಕಿಕೊಂಡ ಡಾ.ಬಿ.ಆರ್. ಅಂಬೇಡ್ಕರ್ ಓದು ಕಾರ್ಯಕ್ರಮ ಅರ್ಥಪೂರ್ಣವಾಗಿದೆ ಎಂದು ಹೇಳಿದರು.

ಉಪನ್ಯಾಸಕ ಎಮ್.ಜಿ.ದೇವಡಿ ಅವರು ಡಾ:ಅಂಬೇಡ್ಕರ ಜೀವನದ ಕುರಿತು ಮಾತನಾಡಿದರು.

ಕಾರ್ಯಕ್ರಮದ ಅಂಗವಾಗಿ ನಡೆದ ರಸಪ್ರಶ್ನೆ, ಆಶುಭಾಷಣ, ಪ್ರಬಂಧ ಸ್ಪರ್ಧೆಯಲ್ಲಿ ಭಾಗವಹಿಸಿದ್ದ ವಿಜೇತ ವಿದ್ಯಾರ್ಥಿಗಳಿಗೆ ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ವತಿಯಿಂದ ಬಹುಮಾನಗಳನ್ನು ನೀಡಲಾಯಿತು.
ಕಾರ್ಯಕ್ರಮದಲ್ಲಿ ಕಾಲೇಜು ಅಭಿವೃದ್ಧಿ ಸಮೀತಿ ಅಧ್ಯಕ್ಷ ರಾಮಣ್ನಾ ಕೋಳಿ, ಲಕ್ಕಪ್ಪ ಪೂಜೇರಿ, ಸಾಗರ ಕುಲಕರ್ಣಿ, ಉಪನ್ಯಾಸಕರಾದ ಕೆ.ಬಿ.ಬೆಳಗಲಿ, ಎಲ್.ಎಸ್.ವಾರೇಪ್ಪಗೋಳ, ವಾಯ್.ಎಲ್. ಶೇಖರಗೋಳ, ಎ.ವಿ.ಮೆಳವಂಕಿ, ಕೆ.ಎಂ.ಉಪ್ಪಾರ ಮತ್ತಿತರು ಇದ್ದರು.
ಜ್ಯೋತಿ ಡಬ್ಬನವರ ನಿರೂಪಿಸಿದರು, ವಿ.ಬಿ.ಜೋಡಹಟ್ಟಿ ಸ್ವಾಗತಿಸಿದರು, ಲಿಲಾತಾ ಕೋಳಿ ವಂದಿಸಿದರು.

 


Spread the love

About inmudalgi

Check Also

ಮಾರುತಿ ಕೋಳಿ ಅವರಿಗೆ ರಾಷ್ಟ್ರೀಯ ಪರಶುರಾಮ ಪ್ರಶಸ್ತಿ ಪ್ರಧಾನ

Spread the love ಮಾರುತಿ ಕೋಳಿ ಅವರಿಗೆ ರಾಷ್ಟ್ರೀಯ ಪರಶುರಾಮ ಪ್ರಶಸ್ತಿ ಪ್ರಧಾನ ಮೂಡಲಗಿ: ಕೆರಳಾದ ಶ್ರೀ ಶಟ್ ಶಾಸ್ತ್ರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ