Breaking News
Home / Recent Posts / ಬೆಟಗೇರಿ ಗ್ರಾಮ ಪಂಚಾಯಿತಿಯು ಸಂಪೂರ್ಣ ಪ್ಲಾಸ್ಟಿಕ್ ಬಳಕೆ ನಿಷೇದಕ್ಕೆ ಕ್ರಮ

ಬೆಟಗೇರಿ ಗ್ರಾಮ ಪಂಚಾಯಿತಿಯು ಸಂಪೂರ್ಣ ಪ್ಲಾಸ್ಟಿಕ್ ಬಳಕೆ ನಿಷೇದಕ್ಕೆ ಕ್ರಮ

Spread the love

ವರದಿ. ಅಡಿವೇಶ ಮುಧೋಳ

ಬೆಟಗೇರಿ : ರಾಜ್ಯದಲ್ಲಿ ಪ್ಲಾಸ್ಟಿಕ್ ನಿಷೇಧ ಜಾರಿಯಲ್ಲಿದ್ದರೂ, ಎಲ್ಲ ಗ್ರಾಮ ಗ್ರಾಮ ಪಂಚಾಯತಿಗಳು ಈ ಸಂಬಂಧ ಯಾವುದೇ ಕ್ರಮ ಕೈಗೊಂಡಿಲ್ಲ, ಆದರೆ, ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮ ಪಂಚಾಯಿತಿ ಗ್ರಾಮದಲ್ಲಿ ಸಂಪೂರ್ಣ ಪ್ಲಾಸ್ಟಿಕ್ ಬಳಕೆ ನಿಷೇಧಿಸಿ ಕ್ರಮ ಕೈಗೊಂಡಿದೆ.
ಬೆಟಗೇರಿ ಗ್ರಾಮದ ಹಲವಡೆ ನಿರುಪಯುಕ್ತ ಪ್ಲಾಸ್ಟಿಕ್‍ಗಳ ರಾಶಿ ಬೀಳುತ್ತಿದೆ. ಪ್ಲಾಸ್ಟಿಕ್ ಬಳಕೆಯಿಂದ ಶುಚಿತ್ವಕ್ಕೆ ಸಮಸ್ಯೆ ಉಂಟಾಗಿದ್ದರಿಂದ ಸ್ಥಳೀಯ ಗ್ರಾಮ ಪಂಚಾಯಿತಿದವರು ಈ ಸಂಬಂಧ ಕಟ್ಟುನಿಟ್ಟಿನ ಕ್ರಮ ಕೈಗೊಂಡು ಪ್ಲಾಸ್ಟಿಕ್ ಮುಕ್ತ ಮಾದರಿ ಗ್ರಾಮವಾಗಿಸಲು ಪ್ಲಾಸ್ಟಿಕ್ ಬಳಸುವವರ ವಿರುದ್ಧ ಕಾನೂನಾತ್ಮಕ ಕ್ರಮ ಕೈಗೊಳ್ಳುವ ಎಚ್ಚರಿಕೆ ನೀಡಿದೆ.
ಪ್ಲಾಸ್ಟಿಕ್ ಬಳಕೆ ನಿಷೇಧ ಕುರಿತು ಡಂಗುರ ಸಾರಿ ಗ್ರಾಮಸ್ಥರಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ. ಜತೆಗೆ ಗ್ರಾಮದ ಅಂಗಡಿಗಳಲ್ಲಿ ಪ್ಲಾಸ್ಟಿಕ್ ಬ್ಯಾಗ್, ಚಹಾಕಪ್ ಸೇರಿದಂತೆ ಪ್ಲಾಸ್ಟಿಕ್ ಕವರಗಳ ಬಳಕೆ, ಮಾರಾಟ ಮಾಡಬಾರದು. ಹಾಗೇ ಮಾಡಿದಲ್ಲಿ ಪರಿಸರ ಸಂರಕ್ಷಣಾ ಕಾಯ್ದೆಯಡಿ ಕ್ರಿಮಿನಿಲ್ ಕೇಸ್ ದಾಖಲಿಸಲಾಗುವುದು ಎಂದು ಸ್ಥಳೀಯ ಅಂಗಡಿ-ಮುಂಗಟ್ಟುಗಾರರಿಗೆ ಸಂಪೂರ್ಣ ಪ್ಲಾಸ್ಟಿಕ್ ಬಳಕೆ ನಿಷೇಧ ಕುರಿತು ತಿಳುವಳಿಕೆ ಪತ್ರ ನೀಡಿ ಗ್ರಾಪಂ ಸಿಬ್ಬಂದಿಯವರಿಂದ ಎಚ್ಚರಿಕೆ ನೀಡಲಾಗುತ್ತಿದೆ.
ಸ್ಥಳೀಯರಿಂದ ಮೆಚ್ಚುಗೆ: ಬೆಟಗೇರಿ ಗ್ರಾಮದ ಗ್ರಾಪಂ ನೂತನ ಅಧ್ಯಕ್ಷರು, ಉಪಾಧ್ಯಕ್ಷರು, ಎಲ್ಲಾ ಸದಸ್ಯರ ಹಾಗೂ ಹಿರಿಯ ನಾಗರಿಕರ ಮಾರ್ಗದರ್ಶನದಲ್ಲಿ ಇಲ್ಲಿಯ ಗ್ರಾಪಂ ಸಹಯೋಗದಲ್ಲಿ ಪಿಡಿಒ ಎಚ್.ಎನ್.ಭಾವಿಕಟ್ಟಿ ಮತ್ತು ಸಿಬ್ಬಂದಿಯವರ ಕ್ರೀಯಾಶೀಲ ವ್ಯಕ್ತಿತ್ವದ ಮೂಲಕ ಪಾರದರ್ಶಕ ಆಡಳಿತ ನೀಡುವುದರೊಂದಿಗೆ ಇಂದು ಇಲ್ಲಿಯ ನಾಗರಿಕರ ಹಲವಾರು ಮೂಲಭೂತ ಸೌಲಭ್ಯಗಳು ದೂರಕುತ್ತಿರುವ ಮತ್ತು ಗ್ರಾಮದ ಸಮಗ್ರ ಅಭಿವೃದ್ಧಿ ಹಾಗೂ ಮಾದರಿ ಗ್ರಾಮವನ್ನಾಗಿಸುವಲ್ಲಿ ಪ್ರಯತ್ನಿಸುತ್ತಿರುವ ಗ್ರಾಮ ಪಂಚಾಯ್ತಿದವರ ಕಾರ್ಯಕ್ಕೆ ಸ್ಥಳೀಯರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
“ಬೆಟಗೇರಿ ಗ್ರಾಮದ ನಾಗರಿಕರಲ್ಲಿ, ಅಂಗಡಿ-ಮುಂಗಟ್ಟುಗಾರರಲ್ಲಿ ಪ್ಲಾಸ್ಟಿಕ್ ಬಳಕೆ, ಮಾರಾಟ ಮಾಡದಂತೆ ಸೂಚಿಸಲಾಗಿದೆ. ಈಗಾಗಲೇ ಡಂಗುರ ಸಹ ಸಾರಲಾಗಿದೆ. ಪ್ಲಾಸ್ಟಿಕ್‍ನಿಂದಾಗುವ ದುಷ್ಪರಿಣಾಮದ ಕುರಿತು ಸ್ಥಳೀಯರು ಅರಿತುಕೊಳ್ಳವುದು ಅವಶ್ಯಕವಾಗಿದೆ.


Spread the love

About inmudalgi

Check Also

ಅರಳಮಟ್ಟಿಯಲ್ಲಿ ಭಜನಾ ಕಾರ್ಯಕ್ರಮ

Spread the loveಮೂಡಲಗಿ: ತಾಲೂಕಿನ ಅರಳಿಮಟ್ಟಿ ಗ್ರಾಮದ ಚಕ್ರವರ್ತಿ ಶ್ರೀ ಸದಾಶಿವ ಮುತ್ಯಾನ ಭಜನಾ ಕಾರ್ಯಕ್ರಮ ಹಾಗೂ ಸಮುದಾಯ ಭವನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ