ಮೂಡಲಗಿ: ಕೇಂದ್ರ ಸರ್ಕಾರದ ಕೃಷಿ ಮತ್ತು ರೈತ ಕಲ್ಯಾಣ ಸಚಿವರಾದ ನರೇಂದ್ರ ಸಿಂಗ್ ತೋಮರ ಅವರನ್ನು ರಾಜ್ಯ ಆಹಾರ ಮತ್ತು ನಾಗರಿಕ ಸರಬುರಾಜು, ಗ್ರಾಹಕರ ವ್ಯವಹಾರಗಳ ಸಚಿವರಾದ ಉಮೇಶ್ ಕತ್ತಿ ಹಾಗೂ ರಾಜ್ಯ ಭಾರತೀಯ ಆಹಾರ ನಿಗಮ ಅಧ್ಯಕ್ಷರು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಅವರು ಜಂಟಿಯಾಗಿ ಭೇಟಿಯಾದ ಸಂದರ್ಭದಲ್ಲಿ ಬಿಳಿ ಜೋಳಕ್ಕೆ ನಿಗದಿ ಪಡಿಸಿದ ಕನಿಷ್ಠ ಬೆಂಬಲ ಬೆಲೆ ಹೆಚ್ಚಿಸುವಂತೆ ಮನವಿ ಮಾಡಲಾಯಿತು.
ಶುಕ್ರವಾರ (ಮಾ 12) ರಂದು ನವದೆಹಲಿಯ ಸಚಿವರ ಅಧಿಕೃತ ನಿವಾಸಕ್ಕೆ ಭೇಟಿ ನೀಡಿದ ಅವರು ಹೈಬ್ರೀಡ್ ಬಿಳಿ ಜೋಳಕ್ಕೆ ₹4,154 ಮತ್ತು ಮಾಲ್ದಂಡಿ ಬಿಳಿ ಜೋಳಕ್ಕೆ ₹4,785 ದರವನ್ನು ನಿಗದಿ ಪಡಿಸುವಂತೆ ಮನವಿ ಸಲ್ಲಿಸಿದರು. ಕೃಷಿ ವೆಚ್ಚ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಈಗಿನ ಬೆಲೆ ಸಾಕಾಗುತ್ತಿಲ್ಲ. ರೈತರ ಆರ್ಥಿಕ ಹಿತ ಕಾಪಾಡಲು ಬೆಲೆ ಹೆಚ್ಚಳ ಅವಶ್ಯ ಎಂದು ಸಚಿವರಲ್ಲಿ ಮನವರಿಕೆ ಮಾಡಿದರು.
ಪೋಟೋ ಶೀರ್ಷಿಕೆ: ಮೂಡಲಗಿ: ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಸಚಿವ ನರೇಂದ್ರ ಸಿಂಗ್ ತೋಮರ ಅವರನ್ನು ನವದೆಹಲಿಯಲ್ಲಿ ಭೇಟಿಯಾಗಿ ಬಿಳಿ ಜೋಳಕ್ಕೆ ಬೆಂಬಲ ಬೆಲೆ ಹೆಚ್ಚಿಸಬೇಕೆಂದು ಒತ್ತಾಯಿಸಲಾಯಿತು. ಸಚಿವರಾದ ಉಮೇಶ್ ಕತ್ತಿ, ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಉಪಸ್ಥಿತರಿದ್ದರು.
Check Also
ಖಾನಟ್ಟಿ ಹಾಲು ಉತ್ಪಾದಕರ ಸಹಕಾರಿ ಸಂಘಕ್ಕೆ ಉತ್ತಮ ಸಹಕಾರ ಸಂಘ ಪ್ರಶಸ್ತಿ
Spread the loveಮೂಡಲಗಿ : ಬೆಳಗಾವಿ ಜಿಲ್ಲಾ ಉತ್ತಮ ಸಹಕಾರಿ ಸಂಘ ಪ್ರಶಸ್ತಿ ಬೆಳಗಾವಿಯಲ್ಲಿ ನಡೆದ 71ನೇ ಅಖಿಲ ಭಾರತ …