Breaking News
Home / Recent Posts / ಸಂವಿಧಾನವನ್ನು ರಕ್ಷಿಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ – ಪ್ರಕಾಶ ಮಾದರ

ಸಂವಿಧಾನವನ್ನು ರಕ್ಷಿಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ – ಪ್ರಕಾಶ ಮಾದರ

Spread the love

ಮೂಡಲಗಿ: ಸಮಾನತೆಯ ಹರಿಕಾರ ಡಾ.ಬಾಬಾ ಸಾಹೇಬ ಅಂಬೇಡ್ಕೆರ ಅವರ ಸಂವಿಧಾನವನ್ನು ರಕ್ಷಿಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದು ಮುಖಂಡ ಪ್ರಕಾಶ ಮಾದರ ಹೇಳಿದರು.
ದಲಿತ ಸಂಘರ್ಷ ಸಮಿತಿ(ಸಂಯೋಜಕ) ಕಚೇರಿಯಲ್ಲಿ ಡಾ.ಬಾಬಾ ಸಾಹೇಬ ಅಂಬೇಡ್ಕೆರ ಅವರ 130 ನೇ ಜಯಂತಿ ಪ್ರಯುಕ್ತ ಹಮ್ಮಿಕೊಂಡ ಕಾರ್ಯಕ್ರಮದಲ್ಲಿ ಅಂಬೇಡ್ಕರ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಮಾತನಾಡಿ, ಅಂಬೇಡ್ಕರರು ಬಾಲ್ಯದ ಜೀವನದಲ್ಲಿ ಅನೇಕ ಅವಮಾನಗಳನ್ನು ಎದುರಿಸಿ ಉನ್ನತ ಶಿಕ್ಷಣಪಡೆದು ಹಿಂದುಳಿದ ಜನಾಂಗಕ್ಕಾಗಿ ಶ್ರಮಿಸಿದ ಮಹಾನ ವ್ಯಕ್ತಿ. ಅವರ ಸಂದೇಶಗಳನ್ನು ಪಾಲನೆ ಮಾಡುವುದರ ಮೂಲಕ ಅವರಿಗೆ ಗೌರವ ಸಲ್ಲಿಕೆಯಾಗಬೇಕು ಎಂದರು.
ಸಮಿತಿ ಅಧ್ಯಕ್ಷ ಯಶವಂತ ಮಂಟೂರ,ಪಿಎಸೈ ಎಚ್ ವಾಯ್ ಬಾಲದಂಡಿ ಮಾತನಾಡಿ, ದೀನ,ದಲಿತರ ಆಶಾಕಿರಣ ಮಹಾನಾಯಕ ಡಾ ಅಂಬೇಡ್ಕರ ಅವರ ತತ್ವಾದರ್ಶಗಳನ್ನು ಪ್ರತಿಯೊಬ್ಬರು ಪಾಲಿಸಬೇಕು ಎಂದರು.
ಈ ಸಂದರ್ಭದಲ್ಲಿ ಜಯ ಕರ್ನಾಟಕ ಜನಪರ ವೇದಿಕೆಯ ಶಿವರಡ್ಡಿ ಹುಚರಡ್ಡಿ, ಹನಮಂತ ಸತರಡ್ಡಿ, ಸಿದ್ದಣ್ಣ ದುರದುಂಡಿ, ಸಿದ್ಲಿಂಗಪ್ಪ ಯರಗಟ್ಟಿ, ಸುಂದರ ಹವಳೆವ್ವಗೋಳ ಅನೇಕ ದಲಿತ ಮುಖಂಡರು ಇದ್ದರು.


Spread the love

About inmudalgi

Check Also

ಆರ್.ಡಿ.ಎಸ್. ಪಿಯು ಕಾಲೇಜಿನ ವಾರ್ಷಿಕ ಸ್ನೇಹ ಸಮ್ಮೇಳನ ಮತ್ತು ಬೀಳ್ಕೊಡುವ ಸಮಾರಂಭ

Spread the love  ಮೂಡಲಗಿ : ದಿನಾಂಕ 19-01-2026 ರಂದು ಇಲ್ಲಿನ ಶೈಕ್ಷಣಿಕ ಸಂಸ್ಥೆಯಾದ ಆರ್.ಡಿ.ಎಸ್. ಸ್ವತಂತ್ರ ಪದವಿ ಪೂರ್ವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ