Breaking News
Home / Recent Posts / ಮಂಗಳಾ ಅಂಗಡಿ ಗೆಲವು ನಿಶ್ಚಿತ- ಶಾಸಕ ಬಾಲಚಂದ್ರ ಜಾರಕಿಹೊಳಿ

ಮಂಗಳಾ ಅಂಗಡಿ ಗೆಲವು ನಿಶ್ಚಿತ- ಶಾಸಕ ಬಾಲಚಂದ್ರ ಜಾರಕಿಹೊಳಿ

Spread the love

ಮಂಗಳಾ ಅಂಗಡಿ ಗೆಲವು ನಿಶ್ಚಿತ- ಶಾಸಕ ಬಾಲಚಂದ್ರ ಜಾರಕಿಹೊಳಿ

 

ಗೋಕಾಕ: ಬಿಜೆಪಿ ಅಭ್ಯರ್ಥಿ ಮಂಗಳಾ ಅಂಗಡಿ ಅವರ ಗೆಲುವು ಖಚಿತವೆಂದು ಕೆಎಮ್‍ಎಫ್ ಅಧ್ಯಕ್ಷ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ತಿಳಿಸಿದರು.
ಶನಿವಾರ ಸಂಜೆ ನಗರದ ಹೊಸಪೇಟ ಗಲ್ಲಿಯಲ್ಲಿರುವ ಕೆಬಿಎಸ್ ನಂ 3 ಶಾಲೆಯ ಮತಗಟ್ಟೆಯಲ್ಲಿ ಮತ ಚಲಾಯಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಅಭ್ಯರ್ಥಿ ಪರ ಜಿಲ್ಲೆಯ ಎಲ್ಲ ಸಚಿವರು, ಶಾಸಕರು ಮತ್ತು ಮುಖಂಡರು ಒಗ್ಗಟ್ಟಾಗಿ ಪ್ರಚಾರ ಕಾರ್ಯ ನಡೆಸಿದ್ದೇವೆ. ಮತದಾರರು ಸಹ ಬಿಜೆಪಿ ಜನೋಪಯೋಗಿ ಕಾರ್ಯಕ್ರಮಗಳನ್ನು ಒಪ್ಪಿಕೊಂಡಿದ್ದರಿಂದ ಮಂಗಳಾ ಗೆಲವು ನಿಶ್ಚಿತವೆಂದು ಹೇಳಿದರು.
ಬಿಜೆಪಿ ಅಭ್ಯರ್ಥಿ ಮಂಗಳಾ ಅಂಗಡಿ ಮತ್ತು ಕಾಂಗ್ರೇಸ್ ಅಭ್ಯರ್ಥಿ ಸತೀಶ ಜಾರಕಿಹೊಳಿ ಅವರು ಮೂಲತ: ಗೋಕಾಕ ತಾಲೂಕಿನವರು. ಈ ಹಿನ್ನೆಲೆಯಲ್ಲಿ ಇಬ್ಬರು ಬಗ್ಗೆಯೂ ಮತದಾರರಿಗೆ ಅಭಿಮಾನವಿದೆ. ಬಿಜೆಪಿ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳು ಅಭ್ಯರ್ಥಿ ಆಯ್ಕೆಗೆ sಸಹಕಾರಿಯಾಗಲಿವೆ. ಜೊತೆಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ರಾಜ್ಯಾಧ್ಯಕ್ಷ ನಳಿನಕುಮಾರ ಕಟೀಲ, ಸಚಿವರು, ಸಂಸದರು, ಸೇರಿದಂತೆ ಪಕ್ಷದ ಹಲವು ನಾಯಕರು ಪ್ರಚಾರ ಕಾರ್ಯದಲ್ಲಿ ತೊಡಗಿ ಅಂಗಡಿ ಪರ ಮತಯಾಚಿಸಿದ್ದಾರೆ. ದಿ. ಸುರೇಶ ಅಂಗಡಿಯವರು ಸುಮಾರು 2 ದಶಕಗಳಿಂದ ಸಂಸದರಾಗಿ, ಸಚಿವರಾಗಿ ಲೋಕಸಭಾ ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ದಿ ಪರ ಕೆಲಸ ಮಾಡಿದ್ದಾರೆ. ಮಂಗಳಾ ಅಂಗಡಿಯವರು ನಿಶ್ಚಿತವಾಗಿಯೂ ಲೋಕಸಭೆಯನ್ನು ಹೆಚ್ಚಿನ ಮತಗಳ ಅಂತರದಿಂದ ಪ್ರವೇಶಿಸುವ ವಿಶ್ವಾಸ ವ್ಯಕ್ತಪಡಿಸಿದರು.


Spread the love

About inmudalgi

Check Also

ಮಾರುತಿ ಕೋಳಿ ಅವರಿಗೆ ರಾಷ್ಟ್ರೀಯ ಪರಶುರಾಮ ಪ್ರಶಸ್ತಿ ಪ್ರಧಾನ

Spread the love ಮಾರುತಿ ಕೋಳಿ ಅವರಿಗೆ ರಾಷ್ಟ್ರೀಯ ಪರಶುರಾಮ ಪ್ರಶಸ್ತಿ ಪ್ರಧಾನ ಮೂಡಲಗಿ: ಕೆರಳಾದ ಶ್ರೀ ಶಟ್ ಶಾಸ್ತ್ರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ