Breaking News
Home / Recent Posts / ತಾಲೂಕಾ ಅಧಿಕಾರಿಗಳ ಜೊತೆಗೆ ಕೊರೊನಾ ಸ್ಥಿತಿಗತಿ ಹಾಗೂ ಸೋಂಕು ನಿಯಂತ್ರಣಕ್ಕೆ ಕೈಗೊಂಡಿರುವ ಕ್ರಮಗಳ ಕುರಿತು ಸಭೆ

ತಾಲೂಕಾ ಅಧಿಕಾರಿಗಳ ಜೊತೆಗೆ ಕೊರೊನಾ ಸ್ಥಿತಿಗತಿ ಹಾಗೂ ಸೋಂಕು ನಿಯಂತ್ರಣಕ್ಕೆ ಕೈಗೊಂಡಿರುವ ಕ್ರಮಗಳ ಕುರಿತು ಸಭೆ

Spread the love

 

ಗೋಕಾಕ: ಕರೋನಾ ಸೋಂಕಿತರಿಗೆ ಚಿಕಿತ್ಸೆ ನೀಡುವುದರ ಜೊತೆಗೆ ವೈದ್ಯರು ಸೋಂಕಿತರಿಗೆ ದೈರ್ಯ ತುಂಬುವ ಕೆಲಸ ಮಾಡಬೇಕು ಎಂದು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಹೇಳಿದರು.

ಶನಿವಾರ ರಂದು ಗೋಕಾಕ ತಾಲೂಕಾ ಆಸ್ಪತ್ರೆಗೆ ಭೇಟಿ ನೀಡಿ, ತಾಲೂಕಾ ಅಧಿಕಾರಿಗಳ ಜೊತೆಗೆ ಕೊರೊನಾ ಸ್ಥಿತಿಗತಿ ಹಾಗೂ ಸೋಂಕು ನಿಯಂತ್ರಣಕ್ಕೆ ಕೈಗೊಂಡಿರುವ ಕ್ರಮಗಳ ಕುರಿತು ಸಭೆ ನಡೆಸಿ ಮಾತನಾಡಿದ ಈರಣ್ಣ ಕಡಾಡಿ ಅವರು ಕರೋನಾ ಎರಡನೆ ಅಲೆ ನಿಯಂತ್ರಿಸಲು ಎಲ್ಲ ಇಲಾಖೆಯ ಅಧಿಕಾರಿಗಳು ಒಗ್ಗಟ್ಟಿನಿಂದ ಹೋರಾಡಿ ಕರೋನಾ ಮುಕ್ತವಾಗಿಸಲು ಶ್ರಮಿಸಬೇಕೆಂದರು.

ಕೇಂದ್ರ ಸರ್ಕಾರವು ಈ ನಿಟ್ಟಿನಲ್ಲಿ ಯುದ್ದೋಪಾದಿಯಲ್ಲಿ ಯೋಜನೆಗಳನ್ನು ಜಾರಿಗೆ ತಂದು ಅವುಗಳು ಜನಸಾಮಾನ್ಯರಿಗೆ ಮುಟ್ಟುವಂತೆ ಕಾಳಜಿ ವಹಿಸುತ್ತಿದೆ ಎಂದರಲ್ಲದೇ ಗ್ರಾಮಗಳಲ್ಲಿ ಸಂತೆ ಜಾತ್ರೆಗಳನ್ನು ರದ್ದು ಮಾಡಿ ಕೋವಿಡ್ ಸೋಂಕಿತರಿಗೆ ಚಿಕಿತ್ಸೆ ನೀಡಿ ಸಾವಿನ ಪ್ರಮಾಣ ಕಡಿಮೆ ಮಾಡಲು ಹೆಚ್ಚಿನ ಪ್ರಯತ್ನ ಮಾಡಬೇಕೆಂದರು.


ಸರ್ಕಾರ ನೀಡಿರುವ ಮಾರ್ಗದರ್ಶನಗಳನ್ನು ಕಟ್ಟುನಿಟ್ಟಾಗಿ ಜಾರಿಗೆ ತರಬೇಕು. ಮಾಸ್ಕ ಧರಿಸಿ, ಸಾಮಾಜಿಕ ಅಂತರವನ್ನು ಕಾಯ್ದುಕೊಂಡು ಕೊರೊನಾ ನಿಯಂತ್ರಿಸಲು ಸಾರ್ವಜನಿಕರು ಸಹಕಾರ ನೀಡಬೇಕೆಂದರಲ್ಲದೇ ಕರೋನಾ ಲಸಿಕೆಯನ್ನು 18 ವರ್ಷ ಮೇಲ್ಪಟ್ಟವರು ಪಡೆಯಬೇಕೆಂದರು.
ಗೋಕಾಕ ಡಿ.ವಾಯ.ಎಸ್.ಪಿ ಜಾವೇದ ಇನಾಂದಾರ, ಮೂಡಲಗಿ ತಹಶೀಲ್ದಾರ್ ಮೋಹನ ಭಸ್ಮೆ, ಗೋಕಾಕ ತಹಶೀಲ್ದಾರ್ ನವೀನ ಹುಳ್ಳೂರ, ತಾಲೂಕಾ ಆರೋಗ್ಯಾಧಿಕಾರಿ ಡಾ. ಮುತ್ತಣ್ಣ ಕೊಪ್ಪದ, ಮುಖ್ಯ ವೈದ್ಯಾಧಿಕಾರಿ ಆಂಟಿನ, ಶಂಕರ ಗೋರೋಶಿ, ಬಸವರಾಜ ಹುಳ್ಳೇರ ಸೇರಿದಂತೆ ಇತರರು ಇದ್ದರು.


Spread the love

About inmudalgi

Check Also

ಮಾರುತಿ ಕೋಳಿ ಅವರಿಗೆ ರಾಷ್ಟ್ರೀಯ ಪರಶುರಾಮ ಪ್ರಶಸ್ತಿ ಪ್ರಧಾನ

Spread the love ಮಾರುತಿ ಕೋಳಿ ಅವರಿಗೆ ರಾಷ್ಟ್ರೀಯ ಪರಶುರಾಮ ಪ್ರಶಸ್ತಿ ಪ್ರಧಾನ ಮೂಡಲಗಿ: ಕೆರಳಾದ ಶ್ರೀ ಶಟ್ ಶಾಸ್ತ್ರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ