ಗೋಕಾಕ: ಮಹಾಮಾರಿ ಕೊರೋನಾ 2ನೇ ಅಲೆ ನಿಯಂತ್ರಿಸಲು ರಾಜ್ಯ ಮತ್ತು ಕೇಂದ್ರ ಸರ್ಕಾರ ಸಮರೋಪಾದಿಯಲ್ಲಿ ಕ್ರಮ ಕೈಗೊಳುತ್ತಿದೆ ಎಂದು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಹೇಳಿದರು.
ಗುರುವಾರ ಮೇ.13 ರಂದು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಅವರು, ಗೋಕಾಕ ತಾಲೂಕಾ ಆಸ್ಪತ್ರೆಯ, ಕೋವಿಡ-19 ಲಸಿಕಾ ಕೇಂದ್ರಕ್ಕೆ ಭೇಟಿ ನೀಡಿ 2ನೇ ಹಂತದ ಲಸಿಕೆ ಪಡೆದು ಅಧಿಕಾರಿಗಳೊಂದಿಗೆ ಚರ್ಚಿಸಿದ ಬಳಿಕ ಮಾತನಾಡಿದರು.
ಕೊರೋನಾ ಪ್ರಕರಣಗಳು ಹೆಚ್ಚಾಗುತ್ತಿರುವುದಕ್ಕೆ ಭಯಬೀತರಾಗದೇ ದೈರ್ಯದಿಂದ ಇರಬೇಕು. ರಾಜ್ಯದಲ್ಲಿ ಆಮ್ಲಜನಕದ ಕೊರತೆ ನೀಗಿಸುವ ದೃಷ್ಟಿಯಿಂದ ಹಲವಾರು ಕ್ರಮಗಳನ್ನು ಕೈಗೊಳ್ಳುತ್ತಿದೆ. ಈ ಸಂದರ್ಭದಲ್ಲಿ ಕಾಂಗ್ರೇಸ್ ಪಕ್ಷದ ಕೆಲ ಶಾಸಕರು ರಾಜ್ಯ ಸರ್ಕಾರದ ಕುರಿತು ಇಲ್ಲ ಸಲ್ಲದ ಮಾತುಗಳನ್ನಾಡಿ ನಾಡಿನ ಜನತೆಗೆ ತಪ್ಪು ಮಾಹಿತಿ ನೀಡಿ, ಇದರಲ್ಲಿ ರಾಜಕೀಯ ಮಾಡಬಾರದೆಂದರು. ಕರೊನಾ ಪೀಡಿತ ರೋಗಿಗಳಿಗೆ ಧೈರ್ಯ ತುಂಬುವ ಕೆಲಸ ಮಾಡಬೇಕೆಂದು ಸಲಹೆ ನೀಡಿದರು.
ತಾಲೂಕಾ ಆರೋಗ್ಯಾಧಿಕಾರಿ ಡಾ. ಮುತ್ತಣ್ಣ ಕೊಪ್ಪದ, ಮುಖ್ಯ ವೈದ್ಯಾಧಿಕಾರಿ ಡಾ. ರವೀಂದ್ರ ಅಂಟಿನ್ ಮತ್ತಿತರರು ಇದ್ದರು.