Breaking News
Home / Recent Posts / ರೈತರಿಗೆ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಭರವಸೆ ಜಿಲ್ಲೆಯಲ್ಲಿ ಬಿತ್ತನೆ ಬೀಜ, ಗೊಬ್ಬರಕ್ಕಾಗಿ ಆತಂಕ ಪಡುವ ಅಗತ್ಯವಿಲ್ಲ

ರೈತರಿಗೆ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಭರವಸೆ ಜಿಲ್ಲೆಯಲ್ಲಿ ಬಿತ್ತನೆ ಬೀಜ, ಗೊಬ್ಬರಕ್ಕಾಗಿ ಆತಂಕ ಪಡುವ ಅಗತ್ಯವಿಲ್ಲ

Spread the love

ರೈತರಿಗೆ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಭರವಸೆ
ಜಿಲ್ಲೆಯಲ್ಲಿ ಬಿತ್ತನೆ ಬೀಜ, ಗೊಬ್ಬರಕ್ಕಾಗಿ ಆತಂಕ ಪಡುವ ಅಗತ್ಯವಿಲ್ಲ

ಬೆಳಗಾವಿ: 2021ರ ಮುಂಗಾರು ಹಂಗಾಮಿನಲ್ಲಿ ಕೃಷಿ ಚಟುವಟಿಕೆಗಳ ಸಿದ್ದತೆಗಾಗಿ ಬಿತ್ತನೆ ಬೀಜ ಮತ್ತು ರಸಗೊಬ್ಬರ ಸಾಕಷ್ಟು ದಾಸ್ತಾನು ಆಗಿದ್ದು, ರೈತರು ಗೊಬ್ಬರ ಮತ್ತು ಬೀಜಕ್ಕಾಗಿ ಆತಂಕ ಪಡುವ ಅಗತ್ಯವಿಲ್ಲ ಎಂದು ರಾಜ್ಯಸಭಾ ಸದಸ್ಯ ಹಾಗೂ ರಾಜ್ಯ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷ ಈರಣ್ಣ ಕಡಾಡಿ ಹೇಳಿದರು.
ಗುರುವಾರ ಮೇ 27 ರಂದು ಬೆಳಗಾವಿಯ ಸಂಸದರ ಜನ ಸಂಪರ್ಕ ಕಾರ್ಯಾಲಯದಲ್ಲಿ ಕೃಷಿ ಇಲಾಖೆಯ ಅಧಿಕಾರಿಗಳ ಸಭೆಯ ನಂತರ ಮಾತನಾಡಿದ ಈರಣ್ಣ ಕಡಾಡಿ ಅವರು ಜಿಲ್ಲೆಯ ಮೂಡಲಗಿ ತಾಲೂಕಿನಲ್ಲಿ ಕಡಿಮೆ ಮಳೆಯಾಗಿದ್ದು, ಉಳಿದೆಲ್ಲಾ ತಾಲೂಕುಗಳಲ್ಲಿ ಸರಾಸರಿ ಮಳೆಯಾಗಿರುವುದರಿಂದ ಬಿತ್ತನೆ ಕಾರ್ಯಗಳು ಭರದಿಂದ ಸಾಗಿವೆ ಎಂದರು. ಜಿಲ್ಲೆಯಲ್ಲಿ 7.16 ಲಕ್ಷ್ ಹೇಕ್ಟರ್ ಪ್ರದೇಶದಲ್ಲಿ ಬಿತ್ತನೆ ಗುರಿ ಹೊಂದಿದ್ದು, 1.18 ಸಾವಿರ ಕ್ವಿಂಟಾಲ್ ಬೀಜಗಳ ದಾಸ್ತಾನು ಮಾಡಲಾಗಿದೆ ಎಂದರು.
60.600 ಮೆಕ್ಕೆಜೋಳ, ಶೇಂಗಾ, ಸೋಯಾಬಿನ್, ಹೈಬ್ರಿಡ್ ಜೋಳ, ತೊಗರಿ, ನವಣೆ ಸೇರಿದಂತೆ ಹಲವಾರು ಬೀಜಗಳನ್ನು 35 ರೈತ ಸಂಪರ್ಕ ಕೇಂದ್ರ, 21 ಹೆಚ್ಚುವರಿ ಕೇಂದ್ರ, 133 ಪಿ.ಕೆ.ಪಿ.ಎಸ್‍ಗಳ ಮೂಲಕ ಒಟ್ಟು 189 ಕೇಂದ್ರಗಳ ಮೂಲಕ ಬೀಜಗಳನ್ನು ಸಹಾಯಧನದ ಮೂಲಕ ವಿತರಣೆ ಮಾಡಲಾಗುವುದು ಎಂದರು.
ಮುಂಗಾರು ಹಂಗಾಮಿಗೆ ಬೇಕಾಗುವ ರಸಗೊಬ್ಬರ್ 2.56.140 ಟನ್ ಅವಶ್ಯಕತೆ ಇದ್ದು ಅದರಲ್ಲಿ ಈಗಾಗಲೇ 77.380 ಟನ್ ಜಿಲ್ಲೆಗೆ ಹಂಚಿಕೆ ಮಾಡಲಾಗಿದೆ. ಕೇಂದ್ರ ಸರ್ಕಾರ ರಸಗೊಬ್ಬರದ ಬೆಲೆಯನ್ನು ಕಡಿಮೆ ಮಾಡಿದ್ದು, ರೈತರು ಹಳೆಯ ದರದಲ್ಲಿ ಗೊಬ್ಬರ ಮತ್ತು ಸರ್ಕಾರ ನಿಗದಿಪಡಿಸಿದ ದರದಲ್ಲಿ ಬೀಜಗಳನ್ನು ಖರೀದಿಸಬೇಕೆಂದರು.
ರೈತರಿಗೆ ಈ ವರ್ಷ ಯಾವುದೇ ಬೀಜ ಮತ್ತು ರಸಗೊಬ್ಬರದ ಕೊರತೆಯಾಗುವುದಿಲ್ಲ. ಕರೋನಾ ಲಾಕ್ ಡೌನ್ ಜಾರಿಯಲ್ಲಿರುವುದರಿಂದ ಸರ್ಕಾರದ ನಿಯಮಗಳನ್ನು ಪಾಲಿಸುವತ್ತ ರೈತರ ಗಮನ ಇರಬೇಕು. ಯಾವುದೇ ಗದ್ದಲ, ಗೊಂದಲಗಳಿಗೆ ಅವಕಾಶ ಮಾಡಿಕೊಡದೆ ಅಧಿಕಾರಿಗಳೊಂದಿಗೆ ಸಹಕರಿಸಬೇಕು ಎಂದರು.
ಬೆಳಗಾವಿ ಜಂಟಿ ಕೃಷಿ ನಿರ್ದೇಶಕ ಶಿವನಗೌಡ ಪಾಟೀಲ್, ಉಪ ಕೃಷಿ ನಿರ್ದೇಶಕ ಎಚ್.ಡಿ. ಕೋಳೇಕರ್, ಚಿಕ್ಕೋಡಿ ಉಪ ಕೃಷಿ ನಿರ್ದೇಶಕ ಎಲ್. ಆಯ್. ರೂಢಗಿ, ಕೃಷಿ ಅಧಿಕಾರಿ (ತಾಂತ್ರಿಕ) ಬಸವರಾಜ ಅಂಗಡಿ, ಬೆಳಗಾವಿ ಗ್ರಾಮೀಣ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷ ಶ್ರೀಕರ ಕುಲಕರ್ಣಿ ಇದ್ದರು.


Spread the love

About inmudalgi

Check Also

ಮಾರುತಿ ಕೋಳಿ ಅವರಿಗೆ ರಾಷ್ಟ್ರೀಯ ಪರಶುರಾಮ ಪ್ರಶಸ್ತಿ ಪ್ರಧಾನ

Spread the love ಮಾರುತಿ ಕೋಳಿ ಅವರಿಗೆ ರಾಷ್ಟ್ರೀಯ ಪರಶುರಾಮ ಪ್ರಶಸ್ತಿ ಪ್ರಧಾನ ಮೂಡಲಗಿ: ಕೆರಳಾದ ಶ್ರೀ ಶಟ್ ಶಾಸ್ತ್ರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ