ಮೂಡಲಗಿ ಪಿಕೆಪಿಎಸ್ ಅಮೃತ ಮಹೋತ್ಸವ
ಮೂಡಲಗಿ: ಸ್ಥಳೀಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಮೃತ ಮಹೋತ್ಸವ ಸಮಾರಭಂವು ಜ.27 ರಂದು ಶ್ರೀ ಬಸವ ರಂಗ ಮಂಟಪದಲ್ಲಿ ಸಂಜೆ 4ಗಂಟೆಗೆ ನಡೆಯಲಿದೆ ಎಂದು ಸಂಘದ ಅಧ್ಯಕ್ಷ ಸಂದೀಪ ಸೋನವಾಲ್ಕರ ತಿಳಿಸಿದರು.
ಅವರು ಸಂಘದ ಕಛೇರಿಯಲ್ಲಿ ಬುಧವಾರ ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿ, ಸಮಾರಂಭದ ಸಾನಿಧ್ಯವನ್ನು ಶ್ರೀ ಶಿವಬೋಧರಂಗ ಮಠದ ಪೀಠಾಧಿಪತಿ ಶ್ರೀ ದತ್ತಾತ್ರೇಯಬೋಧ ಸ್ವಾಮಿಗಳು, ಕೊಪ್ಪಳದ ಗವಿಸಿದ್ದೇಶ್ವರ ಮಠದ ಶ್ರೀ ಅಭಿನವ ಗವಿಸಿದ್ದೇಶ್ವರ ಸ್ವಾಮಿಗಳು, ಸುಣಧೋಳಿ ಜಡಿಸಿದ್ದೇಶ್ವರ ಮಠದ ಶ್ರೀ ಶಿವಾನಂದ ಸ್ವಾಮಿಗಳು, ಮುನ್ಯಾಳ-ರಂಗಾಪೂರ-ಬಾಗೋಜಿಕೊಪ್ಪ ಶ್ರೀ ಸದಾಶಿವಮಠದ ಶ್ರೀ ಶಿವಲಿಂಗ ಮುರಘರಾಜೇಂದ್ರ ಶಿವಾಚಾರ್ಯ ಸ್ವಾಮಿಗಳು, ಅಥಣಿ ಮೋಟಗಿ ಮಠದ ಶ್ರೀ ಚನ್ನಬಸವ ಸ್ವಾಮಿಗಳು ವಹಿಸುವರು.
ಅರಬಾವಿ ಕ್ಷೇತ್ರದ ಶಾಸಕ ಹಾಗೂ ಕೆಎಮ್‍ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಉದ್ಘಾಟಿಸುವರು. ಮುಖ್ಯ ಅತಿಥಿಗಳಾಗಿ ಸಹಕಾರ ಸಚಿವ ಎಸ್.ಟಿ.ಸೋಮಶೇಖರ, ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ, ಸಂಸದೆ ಮಂಗಲಾ ಅಂಗಡಿ, ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ, ವಿಪ ಸದಸ್ಯರಾದ ಲಖನ ಜಾರಕಿಹೊಳಿ, ಚನ್ನರಾಜ ಹಟ್ಟಿಹೊಳಿ ಆಗಮಿಸುವರು.
ಮೂಡಲ ಬೆಳಕು ಸ್ಮರಣ ಸಂಚಿಕೆಯನ್ನು ಬಿಡಿಸಿಸಿ ಬ್ಯಾಂಕ್ ಅಧ್ಯಕ್ಷ ರಮೇಶ ಕತ್ತಿ ಬಿಡುಗಡೆ ಮಾಡುವರು, ಅತಿಥಿಗಳಾಗಿ ಬಿಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ಸುಭಾಸ ಢವಳೇಶ್ವರ, ಪುರಸಭೆ ಅಧ್ಯಕ್ಷ ಹನುಮಂತ ಗುಡ್ಲಮನಿ ಮತ್ತ ಸಹಕಾರಿ ಇಲಾಖೆ ಅಧಿಕಾರಿಗಳು ಆಗಮಿಸುವರು ಎಂದು ಸೋನವಾಲ್ಕರ ಹೇಳಿದರು.
ಈ ಸಂದರ್ಭದಲ್ಲಿ ಸದಸ್ಯರಾದ ರವೀಂದ್ರ ಸಣ್ಣಕ್ಕಿ, ಶಿವಲಿಂಗಪ್ಪ ಗೋಕಾಕ, ಶ್ರೀಶೈಲ ಬಳಿಗಾರ, ಮಾಯಪ್ಪ ಕಂಕಣವಾಡಿ, ಸಂಗಮೇಶ ಕೌಜಲಗಿ, ಮಲ್ಲಪ್ಪ ತಳವಾರ ಉಪಸ್ಥಿತರಿದ್ದರು.