:: ಶಾಟ್‍ಪುಟ್ ಸ್ಪರ್ಧೆಯಲ್ಲಿ ತಾಲೂಕಾ ಮಟ್ಟಕ್ಕೆ ಆಯ್ಕೆ ::
ಮೂಡಲಗಿ :ಪಟ್ಟಣದಲ್ಲಿ ಇಂದು ನಡೆದ ವಲಯ ಮಟ್ಟದ ಕ್ರೀಡಾ ಕೂಟದಲ್ಲಿ ಶ್ರೀವಿದ್ಯಾನಿಕೇತನ ಪ್ರಾಥಮಿಕ ಹಾಗೂ ಪ್ರೌಢಶಾಲೆಯ ವಿದ್ಯಾರ್ಥಿನಿ ಕುಮಾರಿ ಸಂಜನಾ ಹಾಲಳ್ಳಿ ಇವಳು ಶಾಟ್‍ಪುಟ್ ಎಸೆತ ಸ್ಪರ್ಧೆಯಲ್ಲಿ ವಲಯ ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದು ತಾಲೂಕ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ ಈ ವಿದ್ಯಾರ್ಥಿನಿಗೆ ಸಂಸ್ಥೆಯ ಅಧ್ಯಕ್ಷರಾದ ಸಂತೋಷ ಟಿ ಪಾರ್ಶಿ ಹಾಗೂ ಮುಖ್ಯೋಪಾಧ್ಯಾಯರಾದ ಶ್ರೀಸಂಗಮೇಶ ಹಳ್ಳೂರ ಹಾಗೂ ಸಿಬ್ಬಂದಿ ವರ್ಗದವರು ಶುಭ ಕೋರಿ ಅಭಿನಂದಿಸಿದ್ದಾರೆ.