Breaking News
Home / Recent Posts / ಶಿಂದಿಕುರಬೇಟದ ಗ್ರಾಮದೇವಿ ದೇವಸ್ಥಾನದ ಜೀರ್ಣೋದ್ಧಾರಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿಯಿಂದ ಚೆಕ್ ವಿತರಣೆ

ಶಿಂದಿಕುರಬೇಟದ ಗ್ರಾಮದೇವಿ ದೇವಸ್ಥಾನದ ಜೀರ್ಣೋದ್ಧಾರಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿಯಿಂದ ಚೆಕ್ ವಿತರಣೆ

Spread the love

ಶಿಂದಿಕುರಬೇಟದ  ಗ್ರಾಮದೇವಿ ದೇವಸ್ಥಾನದ ಜೀರ್ಣೋದ್ಧಾರಕ್ಕೆ
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿಯಿಂದ ಚೆಕ್ ವಿತರಣೆ

ಮೂಡಲಗಿ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಮೂಲಕ ದೇವಸ್ಥಾನದ ಜೀರ್ಣೋದ್ಧಾರಕ್ಕೆ ಸಹಾಯಧನ ನೀಡುವುದರ ಜೊತೆಗೆ ಸಮಾಜಮುಖಿ ಸೇವೆ ಸಲ್ಲಿಸಿ ಕೃಷಿ,ಶಿಕ್ಷಣ, ಸಮಾಜ ಅಭಿವೃದ್ದಿ, ಮಾಶಾಸನ ಹೀಗೆ ಹಲವಾರು ಕಾರ್ಯಗಳನ್ನು ಮಾಡುವುದರ ಜೊತೆಗೆ ಡಾ: ಡಿ.ವಿರೇಂದ್ರ ಹೆಗ್ಗಡೆಯವರ ಮತ್ತು ಮಾತೋಶ್ರೀಯವರ ಮಾರ್ಗದರ್ಶನದಲ್ಲಿ ಗ್ರಾಮಾಭಿವೃದ್ದಿ ಯೋಜನೆಯನ್ನು ರಾಜ್ಯದ ಪ್ರತಿಯೊಂದು ಹಳ್ಳಿಗಳಲ್ಲಿ ಹೆಸರುವಾಸಿಯಾಗಿದೆ ಎಂದು ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಜಿಲ್ಲಾ ನಿರ್ದೇಶಕ ಕೇಶವ ದೇವಾಂಗ ಹೇಳಿದರು.


ಅವರು ಮಂಗಳವಾರದಂದು ಸಮೀಪದ ಶಿಂದಿಕುರಬೇಟ ಗ್ರಾಮದ ಶ್ರೀ ಗ್ರಾಮದೇವಿ(ದ್ಯಾಮವ್ವದೇವಿ) ದೇವಸ್ಥಾನಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ದೇವಸ್ಥಾನ ಜೀರ್ಣೋದ್ಧಾರ ಯೋಜನೆಯಡಿಯಲ್ಲಿ ಒಂದು ಲಕ್ಷ ರೂಪಾಯಿ ಸಹಾಯಧನದ ಚೆಕ್ ವಿತರಿಸಿ ಮಾತನಾಡಿದರು.
ಎಲ್ಲ ಕ್ಷೇತ್ರದಲ್ಲೂ ವಿವಿಧ ಕಾರ್ಯಗಳನ್ನು ಮಾಡುವ ಮೂಲಕ ಡಾ: ಡಿ.ವಿರೇಂದ್ರ ಹೆಗ್ಗಡೆಯವರ ಕೃಪಾಶೀರ್ವಾದೊಂದಿಗೆ ಜನತೆ ನೆಮ್ಮದಿ ಜೀವನ ನಡೆಸಲು ಸಹಕಾರಿಯಾಗಿದೆ ಎಂದರು.
ಈ ಸಂದರ್ಭದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ತಾಲೂಕಾ ಯೋಜನಾಧಿಕಾರಿ ಮಮತಾ ನಾಯ್ಕ, ಮೇಲ್ವಿಚಾರಕಿ ಶ್ರೀದೇವಿ ಪಾಟೀಲ, ಶ್ರೀ ಗ್ರಾಮದೇವಿ ಕಮೀಟಿಯ ಪರುಶರಾಮ ಕೋಳಿ, ನಾಗಲಿಂಗ ಪೋತದಾರ, ಸುರೇಶ ದೇವಮಾನೆ, ಮಂಜುನಾಥ ಮಾನೆಪ್ಪಗೋಳ,ಮಲ್ಲಪ್ಪ ಹೌಂದಯ್ಯಗೋಳ,ಶಂಕರ ಬಡಿಗೇರ, ಶ್ರೀಕಾಂತ ಬಡಿಗೇರ, ಒಕ್ಕೂಟದ ಪದಾಧಿಕಾರಿಗಳು, ಸೇವಾ ಪ್ರತಿನಿಧಿಗಳು ಸೇರಿದಂತೆ ಗ್ರಾಮಸ್ಥರು ಉಪಸ್ಥಿತರಿದ್ದರು.


Spread the love

About inmudalgi

Check Also

ತಂದೆ ತಾಯಿ ಮತ್ತು ಗುರು ಭಕ್ತಿ ವಿದ್ಯಾರ್ಥಿಗಳನ್ನು ಸನ್ಮಾರ್ಗಕ್ಕೆ ಕರೆದುಕೊಂದು ಹೋಗುತ್ತದೆ. ಮುಖ್ಯೋಪಾದ್ಯಾಯ — ಚಂದ್ರಕಾಂತ ಬಿ. ಪೂಜೇರಿ

Spread the loveಮೂಡಲಗಿ : ತಂದೆ ತಾಯಿ ಮತ್ತು ಗುರು ಭಕ್ತಿ ವಿದ್ಯಾರ್ಥಿಗಳನ್ನು ಸನ್ಮಾರ್ಗಕ್ಕೆ ಕರೆದುಕೊಂದು ಹೋಗುತ್ತದೆ ವಿದ್ಯಾರ್ಥಿಗಳು ತಂದೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ