Breaking News
Home / ಬೆಳಗಾವಿ / ನ.29ರಂದು “ಯಾದವಡ ಸಾಂಸ್ಕೃತಿಕ ಉತ್ಸವ” ಕಾರ್ಯಕ್ರಮ

ನ.29ರಂದು “ಯಾದವಡ ಸಾಂಸ್ಕೃತಿಕ ಉತ್ಸವ” ಕಾರ್ಯಕ್ರಮ

Spread the love

ಮೂಡಲಗಿ: ತಾಲೂಕಿನ ಯಾದವಾಡ ಗ್ರಾಮದ ನಮ್ಮ ಕರ್ನಾಟಕ ರಕ್ಷಣಾ ವೇದಿಕೆಯ ನೇತೃತ್ವದಲ್ಲಿ ಕನ್ನಡ ರಾಜ್ಯೋತ್ಸವದ ಅಂಗವಾಗಿ ನ.29ರಂದು “ಯಾದವಡ ಸಾಂಸ್ಕೃತಿಕ ಉತ್ಸವ” ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ನಮ್ಮ ಕರವೇ ಸಂಸ್ಥಾಪಕ ಕಲ್ಮೇಶ ಗಾಣಿಗಿ ಹೇಳಿದರು.
ಶನಿವಾರದಂದು ಪಟ್ಟಣದ ಪತ್ರಿಕಾ ಕಾರ್ಯಾಲದಲ್ಲಿ ಜರುಗಿದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪತ್ರಿ ವರ್ಷವೂ ಕೂಡಾ ಯಾದವಾಡ ಗ್ರಾಮದಲ್ಲಿ ಕನ್ನಡ ನಾಡು ನುಡಿಯ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವಂತ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದ್ದು, ಕಾರ್ಯಕ್ರಮ ಉದ್ಘಾಟಕರಾಗಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಆಗಮಿಸುತ್ತಿದ್ದಾರೆ ಹಾಗೂ ಅನೇಕ ಕಲಾವಿದರು, ತಲಾ ತಂಡಗಳು ಭಾಗವಹಿಸಲಿದ್ದಾರೆ. ಆದರಿಂದ ಸುತ್ತಮುತ್ತಿನ ಸಾರ್ವಜನಿಕರು ಭಾಗವಹಿಸುವ ಮೂಲಕ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಮನವಿ ಮಾಡಿಕೊಂಡರು.
 ನ. 29ರಂದು ಸಂಜೆ 6 ಗಂಟೆಗೆ ರಾಷ್ಟ್ರಮಟ್ಟದ ಸಮೂಹ ನೃತ್ಯ ಸ್ಪರ್ಧೆಯನ್ನು ಹಮ್ಮಿಕೊಳ್ಳಲಾಗಿದ್ದು, ಪ್ರಥಮ ಬಹುಮಾನ 35 ಸಾವಿರ ದ್ವಿತೀಯ 30 ಸಾವಿರ, ತೃತೀಯ 25 ಸಾವಿರ, ಚತುರ್ಥ 20 ಸಾವಿರ, ಪಂಚಮ 15 ಸಾವಿರ, ಷಷ್ಠಿ 10 ಸಾವಿರ, ಸಪ್ತಮಿ 7 ಸಾವಿರ, ಅಷ್ಟಮಿ 5 ಸಾವಿರ ಬಹುಮಾನಗಳನ್ನು ನೀಡಲಾಗುವುದು. ಹೆಚ್ಚಿನ ಮಾಹಿತಿಗಾಗಿ ಮೊ, 9901774988, 9008316143, 9739483248, 9538573484ಗೆ ಸಂಪರ್ಕಿಸಿ ಬಹುದೆಂದು ತಿಳಿಸಿದರು.
ಈ ಸಂದರ್ಭದಲ್ಲಿ ಸಂಘಟನೆಯ ಸದಸ್ಯರಾದ ವೆಂಕಟೇಶ ಇಟ್ಟನ್ನವರ, ವೆಂಕಟೇಶ ದಾಸರ ಇದ್ದರು.

Spread the love

About inmudalgi

Check Also

ಮಾರುತಿ ಕೋಳಿ ಅವರಿಗೆ ರಾಷ್ಟ್ರೀಯ ಪರಶುರಾಮ ಪ್ರಶಸ್ತಿ ಪ್ರಧಾನ

Spread the love ಮಾರುತಿ ಕೋಳಿ ಅವರಿಗೆ ರಾಷ್ಟ್ರೀಯ ಪರಶುರಾಮ ಪ್ರಶಸ್ತಿ ಪ್ರಧಾನ ಮೂಡಲಗಿ: ಕೆರಳಾದ ಶ್ರೀ ಶಟ್ ಶಾಸ್ತ್ರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ