Breaking News
Home / Recent Posts / ದಾಲ್ಮಿಯಾ ಸಿಮೆಂಟ್ ಕಾರ್ಖಾನೆಯಿಂದ ಪ್ಲಾಸ್ಟಿಕ್ ಬಳಕೆಯನ್ನು ನಿಲ್ಲಿಸಲು ಬಟ್ಟೆ ಚೀಲ ವಿತರಣೆ

ದಾಲ್ಮಿಯಾ ಸಿಮೆಂಟ್ ಕಾರ್ಖಾನೆಯಿಂದ ಪ್ಲಾಸ್ಟಿಕ್ ಬಳಕೆಯನ್ನು ನಿಲ್ಲಿಸಲು ಬಟ್ಟೆ ಚೀಲ ವಿತರಣೆ

Spread the love

ದಾಲ್ಮಿಯಾ ಸಿಮೆಂಟ್ ಕಾರ್ಖಾನೆಯಿಂದ
ಪ್ಲಾಸ್ಟಿಕ್ ಬಳಕೆಯನ್ನು ನಿಲ್ಲಿಸಲು ಬಟ್ಟೆ ಚೀಲ ವಿತರಣೆ

ಮೂಡಲಗಿ: ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ತಾಲೂಕಿನ ಯಾದವಾಡ ದಾಲ್ಮಿಯಾ ಸಿಮೆಂಟ್ ಕಾರ್ಖಾನೆಯ ಆವರಣದಲ್ಲಿ ಸಸಿ ನಡೆಯುವ ಕಾರ್ಯಕ್ರಮ ಜರುಗಿತು.
ದಾಲ್ಮಿಯಾ ಸಿಮೆಂಟ್ ಕಾರ್ಖಾನೆಯ ಯಾದವಾಡ ಘಟಕದ ಮುಖ್ಯಸ್ಥ ಪ್ರಭಾತ್ ಕುಮಾರ್ ಸಿಂಗ್ ಮತ್ತು ಸ್ಪೂರ್ತಿ ಲೇಡಿಸ್ ಕ್ಲಬ್ ಅಧ್ಯಕ್ಷೆ ವಂದನಾ ಸಿಂಗ್ ಅವರು ಸಸಿನೆಟ್ಟು ನೀರು ಉಣಿಸುವ ಸಸಿ ನಡೆವು ಕಾರ್ಯಕ್ರಮಕ್ಕೆ ಚಾಲನೆಯನ್ನು ನೀಡಿದರು.
ಕಾರ್ಖಾನೆಯ ಎಲ್ಲ ಸಿಬ್ಬಂದಿ ವರ್ಗ ಕುಟುಂಬ ಸಮೇತವಾಗಿ ಸುಮಾರು 2 ಸಾವಿರ ಸಸಿಗಳನ್ನು ನೆಡುವುದರ ಮೂಲಕ ಅರ್ಥಪೂರ್ಣವಾಗಿ ವಿಶ್ವ ಪರಿಸರ ದಿನವನ್ನು ಆಚರಿಸಿದರು.
ಪರಿಸರ ರಕ್ಷಣೆಯ ಪ್ರತಿಜ್ಞೆ ಮಾಡಿ ಪ್ಲಾಸ್ಟಿಕ್ ಬಳಕೆಯನ್ನು ನಿಲ್ಲಿಸಲು ಕಾರ್ಖಾನೆ ವತಿಯಿಂದ ಬಟ್ಟೆ ಚೀಲಗಳನ್ನು ಸಿಬ್ಬಂದಿಗಳಿಗೆ ವಿತರಿಸಲಾಯಿತು.
ಕಾರ್ಖಾನೆಯ ಮಾನವ ಸಂಪನ್ಮೂಲ ವಿಭಾಗದ ಮುಖ್ಯಸ್ಥ ಮಯಾಂಕ ಕುಮಾರ ಪಠಾಕ ಹಾಗೂ ಕಾರ್ಖಾನೆಯ ವಿವಿಧ ವಿಭಾಗದ ಮುಖ್ಯಸ್ಥರು ಮತ್ತು ಮಹಿಳಾ ಕ್ಲಬ್ ಸದಸ್ಯರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದರು. ಮರಿನ್ಮಯ್ ಚಕ್ರವರ್ತಿ ಕಾರ್ಯಕ್ರಮ ನಿರೂಪಿಸಿ ಸ್ವಾಗತಿಸಿದರು.


Spread the love

About inmudalgi

Check Also

ಡಿ.ಸಿ.ಸಿ.ಬ್ಯಾಂಕಿನ ಉಪಾಧ್ಯಕ್ಷರಾದ ಸುಭಾಸ ಢವಳೇಶ್ವರ ಅವರಿಗೆ ಮೂಡಲಗಿ ತಾಲೂಕಾ ಪಂಚಮಸಾಲಿ ಘಟಕದವತಿಯಿಂದ ಸನ್ಮಾನ

Spread the love   ಸನ್ಮಾನ ಮೂಡಲಗಿ:-ಪಟ್ಟಣದ ಪ್ರತಿಷ್ಠಿತ ದಿ.ಮೂಡಲಗಿ ಕೋ-ಆಪ್ ಬ್ಯಾಂಕಿನ  ಸಭಾ ಭವನದಲ್ಲಿ  ವಿದೇಶ ಪ್ರಯಾಣ ಮಾಡಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ